ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸ್ವೀಕರಿಸಿದ ಬೆನ್ನಲ್ಲೇ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರನ್ನು ಶಿಕ್ಷಣ ಸಚಿವಾಲಯದ ತಾತ್ಕಾಲಿಕ (Interim) ಸಚಿವರನ್ನಾಗಿ ನೇಮಕ ಮಾಡಿ ಅಧಿಕೃತ ಆದೇಶ ಹೊರಡಿಸಲಾಗಿದೆ.
ಅಧಿಕೃತ ಆದೇಶದ ವಿವರರಾಷ್ಟ್ರಪತಿ ಭವನ ಹೊರಡಿಸಿರುವ ಪ್ರಕಟಣೆಯ ಪ್ರಕಾರ, “ಪ್ರಧಾನಮಂತ್ರಿಗಳ ಸಲಹೆಯ ಮೇರೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ. ಮುಂದುವರಿದು, ಪ್ರಧಾನಿಯವರ ಶಿಫಾರಸಿನಂತೆ ಸಂಪುಟ ಸಚಿವ ಪ್ರಲ್ಹಾದ್ ಜೋಶಿ ಅವರಿಗೆ ತಮ್ಮ ಹಾಲಿ ಇಲಾಖೆಗಳ ಜೊತೆಗೆ ಹೆಚ್ಚುವರಿಯಾಗಿ ಶಿಕ್ಷಣ ಸಚಿವಾಲಯದ ಉಸ್ತುವಾರಿಯನ್ನು ವಹಿಸಲು ರಾಷ್ಟ್ರಪತಿಗಳು ನಿರ್ದೇಶಿಸಿದ್ದಾರೆ” ಎಂದು ತಿಳಿಸಲಾಗಿದೆ.ಕರ್ನಾಟಕದ ಧಾರವಾಡ ಲೋಕಸಭಾ ಕ್ಷೇತ್ರದ ಹಿರಿಯ ಬಿಜೆಪಿ ಸಂಸದರಾಗಿರುವ ಜೋಶಿ ಅವರು, ಪ್ರಸ್ತುತ ಕೇಂದ್ರದಲ್ಲಿ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ ಹಾಗೂ ನವೀಕರಿಸಬಹುದಾದ ಇಂಧನ ಸಚಿವಾಲಯಗಳ ಜವಾಬ್ದಾರಿಯನ್ನು ನಿರ್ವಹಿಸುತ್ತಿದ್ದಾರೆ.









