ಪುತ್ತೂರು: ಜಿಡೆಕಲ್ಲು ಪ್ರಥಮ ದರ್ಜೆ ಸರಕಾರಿ ಕಾಲೇಜಿಗೆ ತೆರಳಲು ಹೆಚ್ಚುವರಿ ಸರಕಾರಿ ಬಸ್ ವ್ಯವಸ್ಥೆ ಕಲ್ಪಿಸುವಂತೆ ವಿದ್ಯಾರ್ಥಿಗಳು ಶಾಸಕ ಅಶೋಕ್ ರೈ ಗೆ ಮನವಿ ಸಲ್ಲಿಸಿದರು.ಶಾಸಕರ ಕಚೇರಿಗೆ ಬಂದು ಮನವಿ ಸಲ್ಲಿಸಿದ ವಿದ್ಯಾರ್ಥಿಗಳುನಮ್ಮ ಕಾಲೇಜಿನಲ್ಲಿ ಸುಮಾರು 150 ಕ್ಕಿಂತ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ಈಗಾಗಲೇ ಬೆಳಗ್ಗೆ ಮತ್ತು ಸಂಜೆ ಒಂದು ಬಸ್ಸಿನ ವ್ಯವಸ್ಥೆ ಇದ್ದು, ಬಸ್ಸಿನಲ್ಲಿ ಪ್ರಯಾಣಿಸುವ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗಿರುವುದರಿಂದ ವಿದ್ಯಾರ್ಥಿಗಳಿಗೆ ಒಂದೇ ಬಸ್ಸಿನಲ್ಲಿ ಪ್ರಯಾಣಿಸಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಬೆಳಗ್ಗೆ ಮತ್ತು ಸಂಜೆ ಹೆಚ್ಚುವರಿ ಬಸ್ಸಿನ ವ್ಯವಸ್ಥೆಯನ್ನು ಕಲ್ಪಿಸಿ ಬೆಳಗ್ಗೆ ಗಂಟೆ 8.50 ಮತ್ತು 9.10 ಕ್ಕೆ ಹಾಗೂ ಸಂಜೆ 3.30 ಮತ್ತು 4.30 ಗಂಟೆಗೆ ಹೆಚ್ಚುವರಿ ಬಸ್ ವ್ಯವಸ್ಥೆಯನ್ನು ಒದಗಿಸಿ ಕೊಡಬೇಕಾಗಿ ಮನವಿಯಲ್ಲಿ ತಿಳಿಸಲಾಗಿದೆ.

ವಿದ್ಯಾರ್ಥಿಗಳು ಮನವಿ ನ್ಯಾಯಯುತವಾಗಿಯೇ ಇದೆ. ಈಗಾಗಲೇ ಎರಡು ಬಸ್ ವ್ಯವಸ್ಥೆ ಇದೆ. ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗಿರುವ ಕಾರಣ ಹೆಚ್ಚುವರಿ ಬಸ್ ಬೇಡಿಕೆ ಇಟ್ಟಿದ್ದಾರೆ. ಕೆಎಸ್ಆರ್ಟಿಸಿ ಡಿ ಸಿ ಜೊತೆ ಮಾತನಾಡಿ ಪರಿಶೀಲಿಸಿ ತಕ್ಷಣ ಕ್ರಮಕ್ಕೆ ಸೂಚನೆ ನೀಡಿದ್ದೇನೆಅಶೋಕ್ ರೈ ಶಾಸಕರು,ಪುತ್ತೂರು

Leave a Reply

Your email address will not be published. Required fields are marked *

Join WhatsApp Group
error: Content is protected !!