ಕಡಬ: ಮದ್ಯದ ಅಮಲಿನಲ್ಲಿ ಪತ್ನಿಗೆ ಹಲ್ಲೆ ನಡೆಸಿ, ಗ್ಯಾಸ್ ಸಿಲಿಂಡರ್ ತೆರೆದು ಬೆಂಕಿ ಹಚ್ಚಿ ಕೊಲ್ಲುವುದಾಗಿ ಜೀವ ಬೆದರಿಕೆ ಹಾಕಿದ ಆರೋಪದಡಿ ವ್ಯಕ್ತಿಯೊಬ್ಬರ ವಿರುದ್ಧ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಐತ್ತೂರು ಗ್ರಾಮದ ಕೈಕುರೆ ನಿವಾಸಿ ಶಿವರಾಮ ವಿರುದ್ಧ ಪತ್ನಿ ರೇಖಾ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ.ದೂರಿನ ಪ್ರಕಾರ, 9 ವರ್ಷಗಳ ಹಿಂದೆ ವಿವಾಹವಾಗಿದ್ದು, ದಂಪತಿಗೆ 7 ವರ್ಷದ ಮಗನಿದ್ದಾನೆ. ಇತ್ತೀಚಿನ ದಿನಗಳಲ್ಲಿ ಶಿವರಾಮ ಅತಿಯಾಗಿ ಮದ್ಯಪಾನ ಮಾಡುತ್ತಿದ್ದು, ವಿನಾಕಾರಣ ಪತ್ನಿಯ ಚಾರಿತ್ರ್ಯದ ಬಗ್ಗೆ ಶಂಕೆ ವ್ಯಕ್ತಪಡಿಸಿ ಮಾನಸಿಕ ಹಿಂಸೆ ನೀಡುತ್ತಿದ್ದ ಎಂದು ಆರೋಪಿಸಲಾಗಿದೆ.ಜುಲೈ 22ರಂದು ರಾತ್ರಿ ಮದ್ಯದ ಅಮಲಿನಲ್ಲಿ ಮನೆಗೆ ಬಂದ ಆರೋಪಿ, ಅಶ್ಲೀಲ ಪದಗಳಿಂದ ನಿಂದಿಸಿ ಕೈಯಿಂದ ಹಲ್ಲೆ ನಡೆಸಿದಲ್ಲದೆ, ತಲೆಯನ್ನು ಗೋಡೆಗೆ ತಳ್ಳಿದ್ದಾನೆ ಎನ್ನಲಾಗಿದೆ. ಪತ್ನಿಯ ನೆರವಿಗೆ ಬಂದ ತನ್ನ ತಾಯಿ ಜಾನಕಿ ಅವರ ಮೇಲೆಯೂ ಹಲ್ಲೆ ನಡೆಸಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.ಇದಲ್ಲದೆ, ಗ್ಯಾಸ್ ಸಿಲಿಂಡರ್ ತೆರೆದು ಬೆಂಕಿ ಹಚ್ಚಿ ಕೊಲ್ಲುವುದಾಗಿ ಜೀವ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಲಾಗಿದೆ. ಹಲ್ಲೆಯಿಂದ ಗಾಯಗೊಂಡ ರೇಖಾ ಅವರು ಕಡಬ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಬಳಿಕ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.ಈ ಕುರಿತು ಕಡಬ ಪೊಲೀಸರು ಭಾರತೀಯ ನ್ಯಾಯ ಸಂಹಿತೆ (BNS) ಕಲಂ 85, 115(2), 352 ಹಾಗೂ 351(3) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!