ಬೆಂಗಳೂರು: ರಸ್ತೆ ಬದಿಯಲ್ಲಿ ಕ್ಯಾಬ್‌ಗಾಗಿ ಕಾಯುತ್ತಿದ್ದ ಯುವತಿಗೆ ಅಸಭ್ಯವಾಗಿ ವರ್ತಿಸಿ ‘ರೇಟ್’ ಕೇಳಿ ಕಿರುಕುಳ ನೀಡಿದ್ದ ಆರೋಪಿಯನ್ನು ರಾಮಮೂರ್ತಿನಗರ ಪೊಲೀಸರು ಬಂಧಿಸಿದ್ದಾರೆ.ಬಂಧಿತನನ್ನು ರಾಮಮೂರ್ತಿನಗರದ ಎನ್‌ಆರ್‌ಐ ಲೇಔಟ್ ನಿವಾಸಿ ಹಾಗೂ ಹಣ್ಣಿನ ವ್ಯಾಪಾರಿ ವಿಜಯ್ ರಾಘವ್ ಎಂದು ಗುರುತಿಸಲಾಗಿದೆ.ಯುವತಿ ನೀಡಿದ ದೂರಿನ ಮೇರೆಗೆ ರಾಮಮೂರ್ತಿನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು. ಘಟನೆಯ ವೇಳೆ ಯುವತಿ ಮೊಬೈಲ್‌ನಲ್ಲಿ ವಿಡಿಯೊ ಚಿತ್ರೀಕರಿಸಲು ಆರಂಭಿಸಿದಾಗ ಆರೋಪಿ ಸ್ಥಳದಿಂದ ಪರಾರಿಯಾಗಿದ್ದನು. ಬಳಿಕ ಯುವತಿ ಆ ವಿಡಿಯೊವನ್ನು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡು ಆರೋಪಿಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದರು.ವಿಡಿಯೊ ಆಧರಿಸಿ ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ವಿಚಾರಣೆಗೆ ಒಳಪಡಿಸಿದ್ದಾರೆ. ಪ್ರಕರಣಕ್ಕೆ ಬಳಸಿದ್ದ ಬೈಕ್‌ನ್ನು ಕೂಡ ವಶಪಡಿಸಿಕೊಂಡಿದ್ದಾರೆ. ಪ್ರಕರಣದ ಕುರಿತು ರಾಮಮೂರ್ತಿನಗರ ಪೊಲೀಸ್ ಠಾಣೆಯಲ್ಲಿ ತನಿಖೆ ಮುಂದುವರಿದಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!