ಮಂಗಳೂರು: ಮಂಗಳೂರು ನಗರ ಪೊಲೀಸ್ ವಶಪಡಿಸಿಕೊಂಡಿದ್ದ ಸುಮಾರು ₹82 ಕೋಟಿ ಮೌಲ್ಯದ ವಿವಿಧ ಮಾದಕ ವಸ್ತುಗಳನ್ನು ನ್ಯಾಯಾಲಯದ ಅನುಮತಿಯೊಂದಿಗೆ ಬುಧವಾರ ವೈಜ್ಞಾನಿಕ ಹಾಗೂ ಪರಿಸರ ಸ್ನೇಹಿ ವಿಧಾನದಲ್ಲಿ ನಾಶಪಡಿಸಲಾಯಿತು.ಮುಲ್ಕಿಯ ಕೊಲ್ನಾಡು ಕೈಗಾರಿಕಾ ಪ್ರದೇಶದಲ್ಲಿರುವ ರಾಮ್ಕಿ ಎನರ್ಜಿ ಆ್ಯಂಡ್ ಎನ್ವಿರಾನ್‌ಮೆಂಟ್ ಲಿಮಿಟೆಡ್ (Re Sustainability Healthcare Solutions Ltd.) ಸಂಸ್ಥೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಂಗಳೂರು ನಗರ ಪೊಲೀಸ್ ವ್ಯಾಪ್ತಿಯ 16 ಪೊಲೀಸ್ ಠಾಣೆಗಳ 59 ಎನ್‌ಡಿಪಿಎಸ್‌ ಪ್ರಕರಣಗಳಿಗೆ ಸಂಬಂಧಿಸಿದ ಮಾದಕ ವಸ್ತುಗಳನ್ನು ಡ್ರಗ್ ಡಿಸ್ಪೋಸಲ್ ಸಮಿತಿಯ ಸಮ್ಮುಖದಲ್ಲಿ ಸುಟ್ಟು ವಿಲೇವಾರಿ ಮಾಡಲಾಯಿತು.ಈ ವೇಳೆ 450 ಕೆಜಿ ಗಾಂಜಾ, 43.260 ಕೆಜಿ ಎಂಡಿಎಂಎ, 80 ಗ್ರಾಂ ಚರಸ್, 880 ಗ್ರಾಂ ಹೈಡ್ರೋ ವೀಡ್ ಗಾಂಜಾ ಹಾಗೂ 1.2 ಕೆಜಿ ಭಾಂಗ್ ನಾಶಪಡಿಸಲಾಯಿತು.ನಾಶಪಡಿಸಿದ ಮಾದಕ ವಸ್ತುಗಳಲ್ಲಿ 2024ರಲ್ಲಿ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಪತ್ತೆಯಾದ ಸುಮಾರು ₹75 ಕೋಟಿ ಮೌಲ್ಯದ 37 ಕೆಜಿ ಎಂಡಿಎಂಎ, 2025ರಲ್ಲಿ ಮುಲ್ಕಿ ಪೊಲೀಸ್ ಠಾಣೆಯಲ್ಲಿ ವಶಪಡಿಸಿಕೊಂಡ ಸುಮಾರು ₹4.47 ಕೋಟಿ ಮೌಲ್ಯದ 4 ಕೆಜಿ ಎಂಡಿಎಂಎ, ಕೊಣಾಜೆ ಪೊಲೀಸ್ ಠಾಣೆಯ ಸುಮಾರು ₹20 ಲಕ್ಷ ಮೌಲ್ಯದ 106 ಕೆಜಿ ಗಾಂಜಾ ಹಾಗೂ ಮೂಡಬಿದ್ರೆ ಪೊಲೀಸ್ ಠಾಣೆಯ ಸುಮಾರು ₹36 ಲಕ್ಷ ಮೌಲ್ಯದ 111 ಕೆಜಿ ಗಾಂಜಾ ಪ್ರಮುಖವಾಗಿವೆ.2026ರಲ್ಲಿ ಇದುವರೆಗೆ 87 ಎನ್‌ಡಿಪಿಎಸ್‌ ಪ್ರಕರಣಗಳು ದಾಖಲಾಗಿದ್ದು, 157 ಮಾದಕ ವಸ್ತು ಮಾರಾಟಗಾರರನ್ನು ಬಂಧಿಸಲಾಗಿದೆ. ಈ ಕಾರ್ಯಾಚರಣೆಗಳಲ್ಲಿ ₹8.18 ಕೋಟಿ ಮೌಲ್ಯದ 148.615 ಕೆಜಿ ಗಾಂಜಾ, 7.165 ಕೆಜಿ ಎಂಡಿಎಂಎ ಹಾಗೂ 1.705 ಕೆಜಿ ಹೈಡ್ರೋ ವೀಡ್ ಸೇರಿದಂತೆ ವಿವಿಧ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದೇ ಅವಧಿಯಲ್ಲಿ ಮಾದಕ ವಸ್ತು ಸೇವನೆಗೆ ಸಂಬಂಧಿಸಿದಂತೆ 463 ಮಂದಿಯ ವಿರುದ್ಧ 356 ಪ್ರಕರಣಗಳನ್ನು ದಾಖಲಿಸಲಾಗಿದೆ.ಮಾದಕ ವಸ್ತುಗಳಿಗೆ ಸಂಬಂಧಿಸಿದ ಯಾವುದೇ ಮಾಹಿತಿ ದೊರೆತರೆ ಪೊಲೀಸ್ ಇಲಾಖೆ ಸೃಜಿಸಿರುವ ಕ್ಯೂಆರ್‌ ಕೋಡ್ ಅಥವಾ ಪೊಲೀಸ್ ಕಂಟ್ರೋಲ್ ರೂಂ 112 / 9480802321 ಸಂಖ್ಯೆಗೆ ಮಾಹಿತಿ ನೀಡುವಂತೆ ಮಂಗಳೂರು ನಗರ ಪೊಲೀಸ್ ಆಯುಕ್ತರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!