ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಜೂನಿಯರ್ ರೆಡ್ ಕ್ರಾಸ್ ಘಟಕದ ಆಶ್ರಯದಲ್ಲಿ ‘ಫಿಲೋ ಆಟಿದ ಕೂಟ’ ಕಾರ್ಯಕ್ರಮವು ಆ.1ರಂದು ಕಾಲೇಜಿನ ರಜತ ಮಹೋತ್ಸವ ಸ್ಮಾರಕ ಭವನದಲ್ಲಿ ನಡೆಯಲಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾಯ್ ದೆ ದೇವುಸ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಡಾ. ಜಾನ್ ಬ್ಯಾಪ್ಟಿಸ್ಟ್ ಸಲ್ದಾನಾ ವಹಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ‘ತುಳುನಾಡ ಮಾಣಿಕ್ಯ’ ಅರವಿಂದ್ ಬೋಳಾರ್ ಭಾಗವಹಿಸಲಿದ್ದಾರೆ.
ಕಾಲೇಜಿನ ಪ್ರಾಂಶುಪಾಲ ಅಶೋಕ್ ರಾಯನ್ ಕ್ರಾಸ್ತಾ, ಪುತ್ತೂರು ಮಾಯ್ ದೆ ದೇವುಸ್ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ರೋಷನ್ ಲಸ್ರಾದೊ ಹಾಗೂ ರಕ್ಷಕ-ಶಿಕ್ಷಕ ಸಂಘದ ಉಪಾಧ್ಯಕ್ಷ ಆಂಥೋನಿ ಒಲಿವೇರಾ ಗೌರವ ಉಪಸ್ಥಿತರಾಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಸಭಾ ಕಾರ್ಯಕ್ರಮದ ಬಳಿಕ ವಿಶೇಷ ಆಕರ್ಷಣೆಯಾಗಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದ್ದು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕಾಲೇಜು ಪ್ರಕಟಣೆ ತಿಳಿಸಿದೆ.









