ಪುತ್ತೂರು, ಜು.31: ಯುವಜನರಲ್ಲಿ ರಾಷ್ಟ್ರಪ್ರೇಮ ಮತ್ತು ದೇಶಾಭಿಮಾನವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಆಗಸ್ಟ್‌ 7ರಂದು ಪುತ್ತೂರಿನಲ್ಲಿ ಬೃಹತ್ ತಿರಂಗಾ ಯಾತ್ರೆ ನಡೆಯಲಿದೆ.
ಈ ಸಂಬಂಧ ನಡೆದ ಪೂರ್ವಭಾವಿ ಸಭೆಯಲ್ಲಿ ಕಾರ್ಯಕ್ರಮದ ರೂಪುರೇಷೆ ಹಾಗೂ ಸಿದ್ಧತೆಗಳ ಕುರಿತು ಸವಿಸ್ತಾರವಾಗಿ ಚರ್ಚಿಸಲಾಯಿತು. ಸಭೆಯಲ್ಲಿ ರಾಜ್ಯಮಟ್ಟದ ಪ್ರಮುಖರು, ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳು, ಶಾಲಾ-ಕಾಲೇಜುಗಳ ಮುಖ್ಯಸ್ಥರು, ಯುವ ಸಂಘಟನೆಗಳ ಮುಖಂಡರು ಹಾಗೂ ಸಾರ್ವಜನಿಕರು ಭಾಗವಹಿಸಿ, ಕಾರ್ಯಕ್ರಮದ ಯಶಸ್ಸಿಗೆ ಸಹಕಾರ ನೀಡುವುದಾಗಿ ಭರವಸೆ ವ್ಯಕ್ತಪಡಿಸಿದರು.
ಆಗಸ್ಟ್‌ 7ರಂದು ಸಂಜೆ 3.30ಕ್ಕೆ ತಿರಂಗಾ ಯಾತ್ರೆ ಆರಂಭವಾಗಲಿದೆ. ದೇಶಭಕ್ತಿಯ ಈ ಕಾರ್ಯಕ್ರಮದಲ್ಲಿ ಯುವಜನರು, ವಿದ್ಯಾರ್ಥಿಗಳು, ವಿವಿಧ ಸಂಘ-ಸಂಸ್ಥೆಗಳ ಸದಸ್ಯರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ.
ಭಾರತದ ಏಕತೆ, ಅಖಂಡತೆ ಹಾಗೂ ರಾಷ್ಟ್ರಪ್ರೇಮದ ಸಂದೇಶವನ್ನು ಜನರಿಗೆ ತಲುಪಿಸುವ ಉದ್ದೇಶದಿಂದ ತಿರಂಗಾ ಯಾತ್ರೆಯನ್ನು ಭವ್ಯವಾಗಿ ಆಯೋಜಿಸಲಾಗುತ್ತಿದೆ. ರಾಷ್ಟ್ರಧ್ವಜದೊಂದಿಗೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಆಯೋಜಕರು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!