ಜಿಲ್ಲೆಯ ತೀವ್ರ ಕುತೂಹಲ ಕೆರಳಿಸಿದ್ದ ಯೋಗೇಶ್ ಗೌಡ ಕೊಲೆ ಪ್ರಕರಣದ ಪ್ರಮುಖ ಆರೋಪಿ, ಮಾಜಿ ಶಾಸಕ ವಿನಯ್ ಕುಲಕರ್ಣಿಗೆ ಹೈಕೋರ್ಟ್‌ನಿಂದ ಜಾಮೀನು ದೊರೆತಿರುವ ಹಿನ್ನೆಲೆಯಲ್ಲಿ ಮೃತ ಯೋಗೇಶ್ ಗೌಡ ಅವರ ಸಹೋದರ ಗುರುನಾಥಗೌಡರ್ ಹಾಗೂ ಹೋರಾಟಗಾರರು ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ಸಜ್ಜಾಗಿದ್ದರೆ, ಇತ್ತ ಯೋಗೇಶ್ ಗೌಡ ಅವರ ಪತ್ನಿ ಮಲ್ಲಮ್ಮ ಅವರು ಮಾತ್ರ ಅತ್ಯಂತ ಅಚ್ಚರಿಯ ಹಾಗೂ ಭಿನ್ನವಾದ ಪ್ರತಿಕ್ರಿಯೆ ನೀಡಿದ್ದಾರೆ.ನಾನು ಯಾವುದೇ ಕಾರಣಕ್ಕೂ ಸುಪ್ರೀಂ ಕೋರ್ಟ್‌ಗೆ ಹೋಗುವುದಿಲ್ಲ ಎಂದು ಮಲ್ಲಮ್ಮ ಹೇಳಿಕೆ ನೀಡಿದ್ದಾರೆ.ನ್ಯಾಯಾಲಯದ ತೀರ್ಪೇ ಅಂತಿಮ: ನಾವೇನು ಹೇಳಲು ಸಾಧ್ಯ?ವಿನಯ್ ಕುಲಕರ್ಣಿ ಅವರಿಗೆ ಜಾಮೀನು ಸಿಕ್ಕಿರುವ ಕುರಿತು ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಮಲ್ಲಮ್ಮ, “ಈ ವಿಷಯದಲ್ಲಿ ನಾವೇನು ಹೇಳಲು ಸಾಧ್ಯವಿಲ್ಲ. ಎಲ್ಲವನ್ನೂ ನ್ಯಾಯಾಲಯ ಮತ್ತು ಗೌರವಾನ್ವಿತ ನ್ಯಾಯಾಧೀಶರಿಗೆ ಬಿಟ್ಟಿದ್ದು. ಕೋರ್ಟ್ ಯಾವ ರೀತಿಯ ತೀರ್ಪು ನೀಡುತ್ತದೆ ಎಂಬುದು ಮೊದಲೇ ಯಾರಿಗೂ ಗೊತ್ತಾಗುವುದಿಲ್ಲ. ನ್ಯಾಯಾಲಯದ ತೀರ್ಪೇ ಅಂತಿಮವಾಗುತ್ತದೆ. ಈ ತೀರ್ಪಿನಿಂದ ನಮಗೇನೂ ಹಿನ್ನಡೆಯಾಗಿದೆ ಎಂದು ನಾನು ಭಾವಿಸುವುದಿಲ್ಲ ಎಂದಿದ್ದಾರೆ.ಮಕ್ಕಳ ಭವಿಷ್ಯಕ್ಕಾಗಿ ಕಾನೂನು ಹೋರಾಟಕ್ಕೆ ಬ್ರೇಕ್!ತಮ್ಮ ಮುಂದಿನ ನಡೆಯ ಬಗ್ಗೆ ಮಾತನಾಡುತ್ತಾ, “ನಾನು ಇನ್ಮುಂದೆ ಯಾವುದೇ ರೀತಿಯ ಕಾನೂನು ಹೋರಾಟವನ್ನು ಮುಂದುವರಿಸುವುದಿಲ್ಲ. ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ನಾನು ಸರ್ವೋಚ್ಚ ನ್ಯಾಯಾಲಯದ (Supreme Court) ಮೆಟ್ಟಿಲೇರುವುದಿಲ್ಲ. ನನಗೆ ನನ್ನ ಮಕ್ಕಳ ಶಿಕ್ಷಣ, ಅವರ ಉಜ್ವಲ ಭವಿಷ್ಯ ಹಾಗೂ ನನ್ನ ಕ್ಷೇತ್ರದ ಜನರ ಅಭಿವೃದ್ಧಿ ಮುಖ್ಯವಾಗಿದೆ. ಅವರ ಸಲುವಾಗಿ ನಾನು ಈ ಕಾನೂನು ಹೋರಾಟದಿಂದ ದೂರ ಉಳಿಯಲು ನಿರ್ಧರಿಸಿದ್ದೇನೆ ಎಂದು ಹೋರಾಟ ಕೈಬಿಡುವ ಮುನ್ಸೂಚನೆ ನೀಡಿದರು.

Leave a Reply

Your email address will not be published. Required fields are marked *

Join WhatsApp Group
error: Content is protected !!