ಕಡಬ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆ ಹಾಗೂ ಗಾಳಿಯ ನಡುವೆ ಅಡಿಕೆ ಮರವೊಂದು ಮುರಿದು ಬಿದ್ದು, ತೋಟದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಕಡಬ ತಾಲೂಕಿನ ಕುಂತೂರು ಗ್ರಾಮದ ಕೇವಳದಲ್ಲಿ ಶುಕ್ರವಾರ ನಡೆದಿದೆ.ಮೃತರನ್ನು ಕೇವಳ ನಿವಾಸಿ ಯಾದವ ಗೌಡ (66) ಎಂದು ಗುರುತಿಸಲಾಗಿದೆ.ಯಾದವ ಗೌಡ ಅವರು ತಮ್ಮ ಅಡಿಕೆ ತೋಟದಲ್ಲಿ ದೈನಂದಿನ ಕೆಲಸದಲ್ಲಿ ತೊಡಗಿದ್ದ ವೇಳೆ ಏಕಾಏಕಿ ಭಾರಿ ಗಾಳಿ-ಮಳೆ ಆರಂಭವಾಗಿದೆ. ಈ ಸಂದರ್ಭ ಬಲವಾದ ಗಾಳಿಗೆ ಅಡಿಕೆ ಮರವೊಂದು ಮುರಿದು ಅವರ ಮೇಲೆ ಬಿದ್ದಿದೆ. ತಲೆ ಹಾಗೂ ದೇಹಕ್ಕೆ ತೀವ್ರ ಗಾಯಗಳಾಗಿದ್ದರಿಂದ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಕಡಬ ತಹಶೀಲ್ದಾರ್ ಗಣೇಶ್ ಸವಣೂರ, ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಈ ಕುರಿತು ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!