ಪುತ್ತೂರು: ಪ್ರಗತಿ ಸ್ಪೆಷಾಲಿಟಿ ಹಾಸ್ಪಿಟಲ್, ಪ್ರಗತಿ ಹಾಸ್ಪಿಟಲ್ ಎಜುಕೇಶನ್ ಟ್ರಸ್ಟ್, ಪುತ್ತೂರು ರೋಟರಿ ಮ್ಯಾಮೊಗ್ರಫಿ ಸೆಂಟರ್ ಹಾಗೂ ರೋಟರಿ ಕ್ಲಬ್ ಪುತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ ನಿರಂತರ ಮಾಸಿಕ ಉಚಿತ ಆರೋಗ್ಯ ತಪಾಸಣಾ ಶಿಬಿರವು ಇಂದು (ಆಗಸ್ಟ್ 1) ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಬೊಳುವಾರ್‌ನಲ್ಲಿರುವ ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನಡೆಯಲಿದೆ.ಶಿಬಿರದಲ್ಲಿ ರಕ್ತದೊತ್ತಡ, ಮಧುಮೇಹ (ಸಕ್ಕರೆ), ಸ್ಪೈರೋಮೆಟ್ರಿ, ಇಸಿಜಿ, ಫೈಬ್ರೋಸ್ಕ್ಯಾನ್, HbA1c, ಥೈರಾಯ್ಡ್, ಮೂಳೆ ಸಾಂದ್ರತಾ ಪರೀಕ್ಷೆ, ಕೊಲೆಸ್ಟ್ರಾಲ್ ತಪಾಸಣೆಗಾಗಿ ಲಿಪಿಡ್ ಪ್ರೊಫೈಲ್, ಮಕ್ಕಳ ಆರೋಗ್ಯ ತಪಾಸಣೆ ಹಾಗೂ ಸ್ತನ ಕ್ಯಾನ್ಸರ್ ಪತ್ತೆಗಾಗಿ ಮ್ಯಾಮೋಗ್ರಫಿ ಪರೀಕ್ಷೆ ನಡೆಸಲಾಗುತ್ತದೆ.ಬಿಪಿಎಲ್ ಕಾರ್ಡ್‌ದಾರರಿಗೆ ಮ್ಯಾಮೋಗ್ರಫಿ ಪರೀಕ್ಷೆಯನ್ನು ಉಚಿತವಾಗಿ ಹಾಗೂ ಇತರರಿಗೆ ರಿಯಾಯಿತಿ ದರದಲ್ಲಿ ಮಾಡಲಾಗುತ್ತದೆ.ಹೆಚ್ಚಿನ ಮಾಹಿತಿಗಾಗಿ 94481 26326, 94837 87876 ಅಥವಾ 94837 87875 ಸಂಖ್ಯೆಗಳನ್ನು ಸಂಪರ್ಕಿಸಬಹುದು ಎಂದು ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ. ಯು. ಶ್ರೀಪತಿ ರಾವ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.









