ಉಪ್ಪಿನಂಗಡಿ: ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದ ನೇತ್ರಾವತಿ ಸೇರಿದಂತೆ ಜಿಲ್ಲೆಯ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಬೆನ್ನಲ್ಲೇ, ಉಪ್ಪಿನಂಗಡಿ ಗ್ರಾಮದ ಹಿರ್ತಡ್ಕ ಸಮೀಪ ನೇತ್ರಾವತಿ ನದಿಯ ದಡದಲ್ಲಿ ಶನಿವಾರ ಮಧ್ಯಾಹ್ನ ಸುಮಾರು 3 ಗಂಟೆಗೆ ಅಪರಿಚಿತ ಪುರುಷನ ಮೃತದೇಹ ಪತ್ತೆಯಾಗಿದೆ.ಮೃತದೇಹ ಪತ್ತೆಯಾದ ಬಗ್ಗೆ ಮಾಹಿತಿ ಪಡೆದ ಉಪ್ಪಿನಂಗಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಮೃತದೇಹವನ್ನು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತನ ಗುರುತು ಪತ್ತೆ ಮಾಡುವ ಕಾರ್ಯ ಮುಂದುವರಿದಿದೆ.ಯಾವುದೇ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪರಿಚಿತ ಪುರುಷ ಕಾಣೆಯಾದ ಬಗ್ಗೆ ದೂರು ದಾಖಲಾಗಿದ್ದರೆ ಅಥವಾ ಮೃತನ ಬಗ್ಗೆ ಮಾಹಿತಿ ತಿಳಿದಿದ್ದರೆ ಉಪ್ಪಿನಂಗಡಿ ಪೊಲೀಸ್ ಠಾಣೆಯನ್ನು 9480805362 ಸಂಖ್ಯೆಯಲ್ಲಿ ಸಂಪರ್ಕಿಸುವಂತೆ ಪೊಲೀಸರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!