ಪುತ್ತೂರು: ಲ್ಯಾಬೊರೇಟರಿ ಕ್ಷೇತ್ರದಲ್ಲಿ ನವೀನ ಸೇವೆಗಳ ಮೂಲಕ ಪುತ್ತೂರು ಹಾಗೂ ಸುತ್ತಮುತ್ತಲಿನ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುತ್ತಿರುವ ಧನ್ವಂತರಿ ಕ್ಲಿನಿಕಲ್ ಲ್ಯಾಬೊರೇಟರಿಯ ವ್ಯವಸ್ಥಾಪಕ ನಿರ್ದೇಶಕ ಚೇತನ್‌ಪ್ರಕಾಶ್‌ ಕಜೆ ಅವರಿಗೆ 2026ನೇ ಸಾಲಿನ ಪ್ರತಿಷ್ಠಿತ ‘ಕನ್ನಡಪ್ರಭ–ಏಷ್ಯಾನೆಟ್ ಸುವರ್ಣ ನ್ಯೂಸ್ ಹೆಲ್ತ್‌ಕೇರ್ ಎಕ್ಸಲೆನ್ಸ್ ಪ್ರಶಸ್ತಿ’ ಪ್ರದಾನಿಸಲಾಯಿತು.ಬೆಂಗಳೂರು ನಗರದ ಕಾನ್ರಾಡ್ ಹೋಟೆಲ್‌ನಲ್ಲಿ ಆ. 2ರಂದು ನಡೆದ ಸಮಾರಂಭದಲ್ಲಿ ಆರೋಗ್ಯ ಸಚಿವ ಯು.ಟಿ. ಖಾದರ್, ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಡಾ. ಸಿ.ಎನ್. ಅಶ್ವತ್ಥನಾರಾಯಣ, ನಟ ಡಾಲಿ ಧನಂಜಯ, ಪದ್ಮಶ್ರೀ ಡಾ. ಸಿ.ಆರ್. ಚಂದ್ರಶೇಖರ್ ಹಾಗೂ ಕನ್ನಡಪ್ರಭ–ಏಷ್ಯಾನೆಟ್ ಸುವರ್ಣ ನ್ಯೂಸ್ ಸಮೂಹ ಸಂಪಾದಕೀಯ ನಿರ್ದೇಶಕ ರವಿ ಹೆಗಡೆ ಅವರು ಚೇತನ್‌ಪ್ರಕಾಶ್‌ ಕಜೆ ಹಾಗೂ ಅವರ ಪತ್ನಿ ಡಾ. ಗೌರಿಪ್ರಸನ್ನ ಅವರಿಗೆ ಪ್ರಶಸ್ತಿ ಪ್ರದಾನಿಸಿದರು.ಆರೋಗ್ಯ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿರುವ ವೈದ್ಯರು ಹಾಗೂ ಆರೋಗ್ಯ ಸಂಸ್ಥೆಗಳನ್ನು ಗುರುತಿಸಿ ಗೌರವಿಸುವ ಉದ್ದೇಶದಿಂದ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ. ಸಮಾರಂಭದಲ್ಲಿ ಡಾ. ಗೌರಿಪ್ರಸನ್ನ, ಪುತ್ರಿ ಜೀವಿಕಾ ಕಜೆ ಹಾಗೂ ಪುತ್ರ ಆಯುಷ್ಮಾನ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

Join WhatsApp Group
error: Content is protected !!