ಪುತ್ತೂರು: ಹೃದಯ ಸಂಬಂಧಿ ಕಾಯಿಲೆಗಳು, ಅಧಿಕ ಕೊಲೆಸ್ಟ್ರಾಲ್ ಹಾಗೂ ರಕ್ತನಾಳಗಳ ಸಮಸ್ಯೆಗಳನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚುವ ಉದ್ದೇಶದಿಂದ ಚೇತನಾ ಆಸ್ಪತ್ರೆ, ಪುತ್ತೂರಿನಲ್ಲಿ ಆಗಸ್ಟ್ 4 (ಮಂಗಳವಾರ) ಬೆಳಿಗ್ಗೆ 10.00ರಿಂದ ಮಧ್ಯಾಹ್ನ 1.00ರವರೆಗೆ ಉಚಿತ ಮೆಗಾ ಲಿಪಿಡ್ ಪ್ರೊಫೈಲ್ ತಪಾಸಣಾ ಶಿಬಿರ ಆಯೋಜಿಸಲಾಗಿದೆ.ಲಿಪಿಡ್ ಪ್ರೊಫೈಲ್ ಪರೀಕ್ಷೆ ಯಾಕೆ ಮಾಡಿಸಬೇಕು?ಲಿಪಿಡ್ ಪ್ರೊಫೈಲ್ ಪರೀಕ್ಷೆಯು ರಕ್ತದಲ್ಲಿರುವ ಒಟ್ಟು ಕೊಲೆಸ್ಟ್ರಾಲ್, ಟ್ರೈಗ್ಲಿಸರೈಡ್ಸ್, HDL (ಒಳ್ಳೆಯ ಕೊಲೆಸ್ಟ್ರಾಲ್) ಹಾಗೂ LDL (ಕೆಟ್ಟ ಕೊಲೆಸ್ಟ್ರಾಲ್) ಮಟ್ಟವನ್ನು ತಿಳಿಯಲು ಸಹಾಯ ಮಾಡುತ್ತದೆ. ಅಧಿಕ ಕೊಲೆಸ್ಟ್ರಾಲ್ ಯಾವುದೇ ಲಕ್ಷಣಗಳಿಲ್ಲದೇ ಹೃದಯಾಘಾತ, ಪಾರ್ಶ್ವವಾಯು ಮತ್ತು ರಕ್ತನಾಳಗಳ ತಡೆಗೆ ಕಾರಣವಾಗಬಹುದು. ಆದ್ದರಿಂದ ಮಧುಮೇಹ, ರಕ್ತದೊತ್ತಡ, ಬೊಜ್ಜು, ಧೂಮಪಾನ ಮಾಡುವವರು, 40 ವರ್ಷ ಮೇಲ್ಪಟ್ಟವರು ಹಾಗೂ ಕುಟುಂಬದಲ್ಲಿ ಹೃದಯ ಕಾಯಿಲೆಯ ಇತಿಹಾಸ ಇರುವವರು ನಿಯಮಿತವಾಗಿ ಲಿಪಿಡ್ ಪ್ರೊಫೈಲ್ ಪರೀಕ್ಷೆ ಮಾಡಿಸಿಕೊಳ್ಳುವುದು ಸೂಕ್ತ.ಆಸಕ್ತ ಸಾರ್ವಜನಿಕರು ಈ ಉಚಿತ ಶಿಬಿರದ ಸದುಪಯೋಗ ಪಡೆದುಕೊಳ್ಳುವಂತೆ ಆಸ್ಪತ್ರೆ ಪ್ರಕಟಣೆಯಲ್ಲಿ ತಿಳಿಸಿದೆ.








