ಬೆಳ್ತಂಗಡಿ: ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವನೆ ಮಾಡಿದ ಆರೋಪದಡಿ ವ್ಯಕ್ತಿಯೊಬ್ಬನ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.ಬೆಳ್ತಂಗಡಿ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರಾದ ಆನಂದ ಎಂ. ಅವರು ಸಿಬ್ಬಂದಿಗಳೊಂದಿಗೆ ರೌಂಡ್ಸ್ ಕರ್ತವ್ಯದಲ್ಲಿದ್ದ ವೇಳೆ ಆ.2 ರಂದು ಸಂಜೆ ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಪೊಟ್ಟುಕೆರೆ ಎಂಬ ಸಾರ್ವಜನಿಕ ಸ್ಥಳದಲ್ಲಿ ವ್ಯಕ್ತಿಯೊಬ್ಬರು ನಶೆಯ ಅಮಲಿನಲ್ಲಿರುವುದನ್ನು ಗಮನಿಸಿದರು.ಆತನನ್ನು ವಿಚಾರಿಸಿದಾಗ ಸಮರ್ಪಕ ಉತ್ತರ ನೀಡದೆ ಅಮಲಿನಲ್ಲಿಯೇ ಮಾತನಾಡುತ್ತಿದ್ದ ಹಿನ್ನೆಲೆಯಲ್ಲಿ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸಿದರು. ಈ ವೇಳೆ ಆತ ನಿಷೇಧಿತ ಮಾದಕ ವಸ್ತುವನ್ನು ಸೇವಿಸಿರುವುದಾಗಿ ಒಪ್ಪಿಕೊಂಡಿದ್ದಾನೆ. ಬಳಿಕ ಆತನನ್ನು ವಿಚಾರಿಸಿದಾಗ ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಶಕ್ತಿನಗರದ ನಿವಾಸಿ ಶ್ರೀರಾಜ್ ಶೆಟ್ಟಿ (36) ಎಂದು ತಿಳಿದುಬಂದಿದೆ.ಆರೋಪಿಯನ್ನು ಬೆಳ್ತಂಗಡಿ ತಾಲೂಕು ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿಗಳ ಮುಂದೆ ಹಾಜರುಪಡಿಸಿದ್ದು, ವೈದ್ಯಕೀಯ ಪರೀಕ್ಷೆಯಲ್ಲಿ ಆತ ಮಾದಕ ವಸ್ತು ಸೇವಿಸಿರುವುದು ದೃಢಪಟ್ಟಿದೆ.ಈ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆಯ ಕಲಂ 27(b) ಹಾಗೂ 22(a) ಅನ್ವಯ ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಳ್ಳಲಾಗಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!