ಪುತ್ತೂರು: ಸೆಂಟ್ರಿಂಗ್ ಕೆಲಸದ ವೇಳೆ ಲಿಂಟಲ್‌ನಿಂದ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಕಾರ್ಮಿಕರೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆಗೆ ಸಂಬಂಧಿಸಿ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ ದಾಖಲಾಗಿದೆ.ಕೊಡಿಪ್ಪಾಡಿ ಗ್ರಾಮದ ಶೇರಾ ಮನೆ ನಿವಾಸಿ ಕೃಷ್ಣಪ್ಪ ಎಸ್. (37) ಅವರು ಜುಲೈ 25ರಂದು ಕೆಯ್ಯೂರು ಗ್ರಾಮದ ಮಾಡವು ಪ್ರದೇಶದಲ್ಲಿರುವ ನಿರ್ಮಾಣ ಹಂತದ ಮನೆಯ ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದ ವೇಳೆ ಲಿಂಟಲ್‌ನಿಂದ ಆಯತಪ್ಪಿ ನೆಲಕ್ಕೆ ಬಿದ್ದಿದ್ದರು. ಪರಿಣಾಮ ಕುತ್ತಿಗೆ ಹಾಗೂ ಸೊಂಟಕ್ಕೆ ಗಂಭೀರ ಗಾಯಗಳಾಗಿದ್ದವು.ಮೊದಲು ಅವರನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗೆ ದೇರಳಕಟ್ಟೆಯ ಕೆ.ಎಸ್. ಹೆಗ್ಡೆ ಆಸ್ಪತ್ರೆಗೆ ದಾಖಲಿಸಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಗಸ್ಟ್ 2ರಂದು ಮುಂಜಾನೆ 2.06ಕ್ಕೆ ಅವರು ಮೃತಪಟ್ಟಿದ್ದಾರೆ.ಈ ಕುರಿತು ಮೃತರ ಸಹೋದರ ವಸಂತ ನೀಡಿದ ದೂರಿನ ಮೇರೆಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಸಂಖ್ಯೆ 26/2026ರಡಿ ಬಿಎನ್‌ಎಸ್‌ಎಸ್ ಕಲಂ 194ರಂತೆ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!