ಮಹಿಳೆಯಾರಿಗಾಗಿ ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತೊಂದು ಹೊಸ ಯೋಜನೆ ಜಾರಿ ಮಾಡಿದೆ. ಪ್ರಮುಖವಾಗಿ ಮಹಿಳೆಯರ ಆರೋಗ್ಯದ ಬಗ್ಗೆ ಕಾಳಜಿ ವಹಿಸುವ ನಿಟ್ಟಿನಲ್ಲಿ ಆರೋಗ್ಯ ಸಚಿವ ಯು.ಟಿ.ಖಾದರ್ ನೇತೃತ್ವದಲ್ಲಿ ಆರೋಗ್ಯ ಇಲಾಖೆಯಿಂದ ‘ಋತುತಾರೆ’ ಎಂದು ಮಹತ್ವದ ಜೋಜನೆ ಜಾರಿಯಾಗಿದೆ.ವಿಧಾನಸೌಧದಲ್ಲಿ ಆರೋಗ್ಯ ಸಚಿವ ಯು.ಟಿ.ಖಾದರ್, ನಟಿ ರಮ್ಯಾ ಜಂಟಿ ಸುದ್ದಿಗೋಷ್ಠಿ ನಡೆಸಿ ಈ ಮಾಹಿತಿ ನೀಡಿದರು. ಮಹಿಳೆಯರಿಗಾಗಿ ಋತುತಾರೆ ಎಂಬ ಹೊಸ ಯೋಜನೆ ಜಾರಿಗೊಳಿಸುತ್ತಿದ್ದೇವೆ. ಮಹಿಳಾ ತಜ್ಞೆ ಜೋಸ್ನಾ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದೆ ಎಂದು ಯು.ಟಿ.ಖಾದರ್ ತಿಳಿಸಿದರು.ತಜ್ಞರು ಹಾಗೂ ನಟಿಯರು ಅನೇಕ ಸಲಹೆಗಳನ್ನು ನೀಡಿದ್ದಾರೆ. ಮಹಿಳೆಯರು ಮಾನಸಿಕ ಒತ್ತಡ, ಹಲವು ಸಮಸ್ಯೆಗಳನ್ನು ಅನುಭವಿಸುತ್ತಿದ್ದಾರೆ. ಮಹಿಳೆಯರ ಆರೋಗ್ಯದ ಬಗ್ಗೆ ಈ ಸಮಿತಿ ಯೋಜನೆಗಳನ್ನು ರೂಪಿಸುತ್ತದೆ. ನಟಿ ರಮ್ಯಾ ಈ ಕಾರ್ಯಕ್ರಮದ ಬ್ರ್ಯಾಂಡ್ ಅಂಬಾಸಿಡರ್ ಎಂದು ತಿಳಿಸಿದರು.

Leave a Reply

Your email address will not be published. Required fields are marked *

Join WhatsApp Group
error: Content is protected !!