ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನೂತನ ರಸ್ತೆ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಬೇಕೆಂದು ದೇವಸ್ಥಾನದ ಭಕ್ತರು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್ ಅವರಿಗೆ ಮಂಗಳವಾರ ಮನವಿ ಸಲ್ಲಿಸಿದರು.ದೇವಸ್ಥಾನದ ಸುರಕ್ಷತೆ ಹಾಗೂ ಭಕ್ತರ ಅನುಕೂಲದ ದೃಷ್ಟಿಯಿಂದ ರಸ್ತೆ ಮತ್ತು ಕಾಂಪೌಂಡ್ ನಿರ್ಮಾಣ ಅಗತ್ಯವಾಗಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.ಕೆಲವರು ಅನಗತ್ಯ ಆಕ್ಷೇಪ ವ್ಯಕ್ತಪಡಿಸುವುದರಿಂದ ಕಾಮಗಾರಿ ವಿಳಂಬವಾಗುತ್ತಿದೆ. ದೇವಸ್ಥಾನಕ್ಕೆ ಆಗಮಿಸುವ ಭಕ್ತರು ಸುರಕ್ಷಿತವಾಗಿ ಹಾಗೂ ಸುಗಮವಾಗಿ ಸಂಚರಿಸಲು ನೂತನ ರಸ್ತೆ ಅತ್ಯಗತ್ಯವಾಗಿರುವುದರಿಂದ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.ಈ ಸಂದರ್ಭದಲ್ಲಿ ದೇವಸ್ಥಾನದ ಭಕ್ತರಾದ ರೋಹನ್‌ರಾಜ್, ನಡುಬೈಲು ಗುತ್ತು ಗೋಪಾಲಕೃಷ್ಣ ಪೂಜಾರಿ, ಹರೀಶ್ ಬಂಗೇರ, ರಕ್ಷಿತ್, ತೇಜಸ್, ಕೃತಿಕ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.










