ಪುತ್ತೂರು: ಕೆದಂಬಾಡಿ ಗ್ರಾಮದ ತ್ಯಾಗರಾಜನಗರ ನಿವಾಸಿ ಹಾಗೂ ಪುತ್ತೂರಿನಲ್ಲಿ ಆಟೋ ರಿಕ್ಷಾ ಚಾಲಕರಾಗಿ ದುಡಿಯುತ್ತಿದ್ದ ಮಹಮ್ಮದ್ ರಫೀಕ್ ಕೆ. (40) ನಾಪತ್ತೆಯಾಗಿರುವ ಕುರಿತು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಆ.2ರಂದು ಸಂಜೆ ಸುಮಾರು 7.30ಕ್ಕೆ ಆಟೋ ರಿಕ್ಷಾ ಬಾಡಿಗೆಗೆ ಹೋಗುವುದಾಗಿ ತಿಳಿಸಿ ಮನೆಯಿಂದ ತೆರಳಿದ್ದ ಮಹಮ್ಮದ್ ರಫೀಕ್ ಬಳಿಕ ಮನೆಗೆ ಮರಳಿಲ್ಲ ಎಂದು ಅವರ ಪತ್ನಿ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.ಪ್ರತಿದಿನ ಪುತ್ತೂರಿನಲ್ಲಿ ಆಟೋ ರಿಕ್ಷಾ ಬಾಡಿಗೆ ಮಾಡಿಕೊಂಡು ಚಾಲನೆ ಮಾಡುತ್ತಿದ್ದ ರಫೀಕ್ ಅವರ ಆಟೋ ರಿಕ್ಷಾ ಪುತ್ತೂರು ಖಾಸಗಿ ಬಸ್ ನಿಲ್ದಾಣದ ಬಳಿ ನಿಲ್ಲಿಸಿರುವುದು ಪತ್ತೆಯಾಗಿದೆ. ಆದರೆ ಅವರ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.ಈ ಸಂಬಂಧ ಪತ್ನಿ ನೀಡಿದ ದೂರಿನ ಮೇರೆಗೆ ಪುತ್ತೂರು ಗ್ರಾಮಾಂತರ ಪೊಲೀಸರು ನಾಪತ್ತೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.ನಾಪತ್ತೆಯಾಗಿರುವ ಮಹಮ್ಮದ್ ರಫೀಕ್ ಅವರ ಬಗ್ಗೆ ಯಾವುದೇ ಮಾಹಿತಿ ದೊರೆತಲ್ಲಿ ಸಾರ್ವಜನಿಕರು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರ ಮೊಬೈಲ್ ಸಂಖ್ಯೆ 9480805335 ಅಥವಾ ಉಪನಿರೀಕ್ಷಕರ ಮೊಬೈಲ್ ಸಂಖ್ಯೆ 9480805363 ಅನ್ನು ಸಂಪರ್ಕಿಸುವಂತೆ ಪೊಲೀಸರು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.










