ಪುತ್ತೂರು: ಮುಂಗಾರು ಮಳೆಯ ಹಿನ್ನೆಲೆಯಲ್ಲಿ ಸಂಭವಿಸಬಹುದಾದ ಪ್ರಾಕೃತಿಕ ವಿಕೋಪದ ಕುರಿತು ಪರಿಶೀಲನೆ ನಡೆಸಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಆ.6ರಂದು ಅಪರಾಹ್ನ 3 ಗಂಟೆಗೆ ಪುತ್ತೂರು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಸಭೆ ನಡೆಯಲಿದೆ.ಈ ಸಭೆಗೆ ಮಾಧ್ಯಮ ಪ್ರತಿನಿಧಿಗಳು ಆಗಮಿಸುವಂತೆ ಪುತ್ತೂರು ತಾಲೂಕು ತಹಶೀಲ್ದಾರ್ ಹಾಗೂ ತಾಲೂಕು ದಂಡಾಧಿಕಾರಿಗಳು ಆಹ್ವಾನ ನೀಡಿದ್ದಾರೆ.ಇದೇ ವೇಳೆ ಸಭೆಗೆ ಸಂಬಂಧಿಸಿದಂತೆ ತಾಲೂಕು ಮಟ್ಟದ ಅಧಿಕಾರಿಗಳಿಗೆ ಪೂರ್ವಭಾವಿ ಸೂಚನೆಯನ್ನೂ ನೀಡಲಾಗಿದೆ. ಪ್ರಾಕೃತಿಕ ವಿಕೋಪದಂತಹ ಮಹತ್ವದ ಸಭೆಯಾಗಿರುವುದರಿಂದ ಯಾವುದೇ ಅಧಿಕಾರಿಗಳು ತಮ್ಮ ಪ್ರತಿನಿಧಿಗಳನ್ನು ಕಳುಹಿಸದೆ ಸ್ವತಃ ಹಾಜರಾಗಬೇಕು ಎಂದು ಸೂಚಿಸಲಾಗಿದೆ.ಅಧಿಕಾರಿಗಳು ತಮ್ಮ ಇಲಾಖೆಗೆ ಸಂಬಂಧಿಸಿದ ಪ್ರಾಕೃತಿಕ ವಿಕೋಪದ ಮಾಹಿತಿ, ಅಗತ್ಯ ಅಂಕಿಅಂಶಗಳು ಹಾಗೂ ವರದಿಗಳೊಂದಿಗೆ ಸಭೆಯಲ್ಲಿ ಪಾಲ್ಗೊಳ್ಳುವಂತೆ ತಹಶೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.










