ಮಾಡೆಲಿಂಗ್ ಯುವತಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಮಾಡಿ ಎಂಬಲ್ಲಿ ಗುರುವಾರ ನಡೆದಿದೆ.ಮೃತರನ್ನು ಕಲ್ಮಾಡಿ ನಿವಾಸಿ ರತ್ನಾ ಎಂಬವರ ಪುತ್ರಿ ಕೃತಿ ಬಂಗೇರಾ (27) ಎಂದು ಗುರುತಿಸಲಾಗಿದೆ.ಕೃತಿ ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದು, ನಗರದ ಕಡಿಯಾಳಿ ಬಳಿಯ ಖಾಸಗಿ ಹೋಟೆಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದಳು. ಈಕೆ ಕಳೆದ ಸುಮಾರು ಐದು ತಿಂಗಳಿಂದ ಕೆಲಸಕ್ಕೆ ಹೋಗದೆ ಮನೆಯಲ್ಲೇ ಇದ್ದರು ಎನ್ನಲಾಗಿದೆ.ಮಾನಸಿಕ ಒತ್ತಡಕ್ಕೆ ಒಳಗಾಗಿದ್ದ ಈಕೆ ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯ ಬೆಡ್ ರೂಮ್ ನಲ್ಲಿ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.










