ಉಡುಪಿ: ಕಾಂಗ್ರೆಸ್ ಮುಖಂಡ ಹಾಗೂ ಉದ್ಯಮಿ ಡೇವಿಡ್ ಡಿಸೋಜಾ ಕೊಲೆ ಪ್ರಕರಣದ ಪ್ರಮುಖ ಆರೋಪಿ, ಉತ್ತರ ಪ್ರದೇಶ ಮೂಲದ ಶೂಟರ್ ರಾಜು ಕಾಲಿಗೆ ಪೊಲೀಸರು ಗುಂಡು ಹಾರಿಸಿರುವ ಘಟನೆ ಉಡುಪಿ ಜಿಲ್ಲೆಯ ಗಡಿಭಾಗದ ಬೈಂದೂರು ಒತ್ತಿನಣೆ ಪ್ರದೇಶದಲ್ಲಿ ನಡೆದಿದೆ.ಡೇವಿಡ್ ಡಿಸೋಜಾ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ಮೂವರು ಆರೋಪಿಗಳು ಬೈಂದೂರಿನ ಒತ್ತಿನಣೆ ಪ್ರದೇಶದಲ್ಲಿ ಇರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ತೆರಳಿದ್ದರು. ಎಸ್‌ಐ ತೇಜಸ್ವಿ ಹಾಗೂ ಪ್ರಸನ್ನ ನೇತೃತ್ವದ ಪೊಲೀಸ್ ತಂಡ ಆರೋಪಿಗಳನ್ನು ಪತ್ತೆಹಚ್ಚಲು ಮುಂದಾದಾಗ, ಆರೋಪಿಗಳು ಪೊಲೀಸರ ಮೇಲೆ ದಾಳಿ ನಡೆಸಿದ್ದಾರೆ ಎನ್ನಲಾಗಿದೆ.ಈ ವೇಳೆ ಆತ್ಮರಕ್ಷಣೆಗಾಗಿ ಪೊಲೀಸರು ಆರೋಪಿ ಶೂಟರ್ ರಾಜು ಮೇಲೆ ಗುಂಡು ಹಾರಿಸಿದ್ದಾರೆ. ಗುಂಡೇಟಿನಿಂದ ರಾಜುವಿನ ಬಲಗಾಲಿಗೆ ಗಾಯವಾಗಿದ್ದು, ಆತನನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಘಟನೆಯಲ್ಲಿ ಎಸ್‌ಐ ತೇಜಸ್ವಿ ಅವರಿಗೂ ಗಾಯವಾಗಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಇಬ್ಬರು ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದು, ಅವರಿಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!