ಪುತ್ತೂರು: ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ (ರಿ.) ದಕ್ಷಿಣ ಕನ್ನಡ ಜಿಲ್ಲಾ ಘಟಕದ ಪುತ್ತೂರು ತಾಲೂಕು ಘಟಕದ 2026-27ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಕೊಂಬೆಟ್ಟು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು.ತಾಲೂಕು ಘಟಕದ ನೂತನ ಅಧ್ಯಕ್ಷರಾಗಿ ಉಪ್ಪಿನಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಭಾರ ಪ್ರಾಂಶುಪಾಲ ಇಬ್ರಾಹಿಂ ಎಂ. ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಬೆಟ್ಟಂಪಾಡಿ ಸರಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಕಮಲಾಕ್ಷ ಆನಡ್ಕ ಅವಿರೋಧವಾಗಿ ಆಯ್ಕೆಯಾದರು.ಉಪಾಧ್ಯಕ್ಷರಾಗಿ ಬಿಳಿಯೂರುಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕಿ ಇಂದಿರಾ ಭಂಡಾರಿ ಕೆ.ಎಂ., ಕಾರ್ಯಾಧ್ಯಕ್ಷರಾಗಿ ಕಬಕ ಸರಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಶ್ರೀನಿವಾಸ ಬಡೆಕ್ಕಿಲ್ಲಾಯ ಆಯ್ಕೆಯಾದರು.ಸಂಚಾಲಕರಾಗಿ ಉಪ್ಪಿನಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕಿ ಆಶಾ ಆರ್., ಸಂಘಟನಾ ಕಾರ್ಯದರ್ಶಿಗಳಾಗಿ ಕೊಂಬೆಟ್ಟು ಸರಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಪ್ರಕಾಶ್ ವಿ.ಕೆ. ಹಾಗೂ ಮುಕ್ರಂಪಾಡಿ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಅಶೋಕ್ ಆಯ್ಕೆಯಾದರು. ಕೋಶಾಧಿಕಾರಿಯಾಗಿ ಕೆಯೂರು ಸರಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಇಸ್ಮಾಯಿಲ್ ಆಯ್ಕೆಯಾದರು.ನೂತನ ಪದಾಧಿಕಾರಿಗಳು ಉಪನ್ಯಾಸಕರ ಹಿತಾಸಕ್ತಿಗಳನ್ನು ಕಾಪಾಡುವುದರ ಜತೆಗೆ ಸಂಘದ ಚಟುವಟಿಕೆಗಳನ್ನು ಮತ್ತಷ್ಟು ಬಲಪಡಿಸಿ, ಶೈಕ್ಷಣಿಕ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುವ ಸಂಕಲ್ಪ ವ್ಯಕ್ತಪಡಿಸಿದರು.ಆಯ್ಕೆ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷ ಹರಿಪ್ರಕಾಶ್ ಬಿ., ಕಾರ್ಯಾಧ್ಯಕ್ಷ ಚಂದ್ರನಾಥ ಎಂ., ಜಿಲ್ಲಾ ಸಲಹಾ ಸಮಿತಿ ಸದಸ್ಯ ಹಾಗೂ ಸವಣೂರು ಸರಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ವಿದ್ಯಾಧರ ರೈ ಸೇರಿದಂತೆ ತಾಲೂಕಿನ ವಿವಿಧ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

Join WhatsApp Group
error: Content is protected !!