ಆಂದ್ರಧ್ರಪ್ರದೇಶದ ರಾಜಮಂಡ್ರಿ (ಅಧಿಕೃತವಾಗಿ ರಾಜಮಹೇಂದ್ರವರಂ) ಪ್ರದೇಶದಲ್ಲಿ ನಡೆದ ಭೀಕರ ರಸ್ತೆ ಅಪಘಾತ ಪ್ರಕರಣವು ತಡವಾಗಿ ಬೆಳಕಿಗೆ ಬಂದಿದೆ. ರಾಜಮಹೇಂದ್ರವರಂನಲ್ಲಿ ನಡೆದ ದುರಂತ ಅಪಘಾತದಲ್ಲಿ 28 ವರ್ಷದ ವೈದ್ಯಕೀಯ ವಿದ್ಯಾರ್ಥಿನಿ ಸಾವನ್ನಪ್ಪಿದ್ದರು.ಈ ಪ್ರಕರಣವು ತುಂಬಾ ತಡವಾಗಿ ಬೆಳಕಿಗೆ ಬಂದಿದೆ.ಮೊದ ಮೊದಲು ಇದಿ ಸಾಮಾನ್ಯ ಅಪಘಾತವೆಂದೇ ಪರಿಗಣಿಸಲಾಗಿತ್ತು. ಆಂಧ್ರಪ್ರದೇಶದ ಪೊಲೀಸರು ಸಹ ಆಂಧ್ರಪ್ರದೇಶದ ರಾಜಮಹೇಂದ್ರವರಂನಲ್ಲಿ ನಡೆದ ಅಪಘಾತದ ಬಗ್ಗೆ ಮಾಹಿತಿ ಕಲೆ ಹಾಕುವುದಕ್ಕೆ ಪ್ರಾರಂಭಿಸಿದ್ದರು. ಈ ಪ್ರದೇಶದಲ್ಲಿ ನಡೆದ ರಸ್ತೆ ಅಪಘಾತದ ಬಗ್ಗೆ ದೊಡ್ಡ ಅನುಮಾನ ವ್ಯಕ್ತವಾಗಿರಲಿಲ್ಲ. ಇದೀಗ ಡಾ. ಪ್ರಿಯಾಂಕಾ (28) ಅವರು ಹೇಗೆ ಮೃತಪಟ್ಟರು ಹಾಗೂ ಅವರ ಸಾವಿಗೆ ಕಾರಣವೇನು ಎನ್ನುವ ವಿಷಯವು ಬಹಿರಂಗವಾಗಿದ್ದು, ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.ಆಂಧ್ರಪ್ರದೇಶದ ರಾಜಮಹೇಂದ್ರವರಂ ಎನ್ನುವ ಪ್ರದೇಶದಲ್ಲಿ ಈ ತಿಂಗಳ ಪ್ರಾರಂಭದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿತ್ತು. ಇದನ್ನು ಅಪಘಾತವೆಂದೇ ಆಂಧ್ರಪ್ರದೇಶದ ಪೊಲೀಸರು ಅಂದುಕೊಂಡಿದ್ದರು. ಆದರೆ ಪ್ರಕರಣದ ತನಿಖೆ ನಡೆಸಿದ ಪೊಲೀಸರಿಗೆ ಗಂಭೀರವಾದ ವಿಷಯ ಬೆಳಕಿಗೆ ಬಂದಿದೆ. ರಾಜಮಹೇಂದ್ರವರಂನಲ್ಲಿ ಈ ತಿಂಗಳ ಆರಂಭದಲ್ಲಿ ನಡೆದ ಭೀಕರ ಅಪಘಾತದ ಘಟನೆ ಇದೀಗ ಬೆಳಕಿಗೆ ಬಂದಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.ಪೂರ್ವ ಗೋದಾವರಿ ಜಿಲ್ಲೆಯ ರಾಜಮಹೇಂದ್ರವರಂನ ಜನಪ್ರಿಯ ಶಾಪಿಂಗ್ ಮಾಲ್‌ವೊಂದರ ಬಳಿ, ಮದ್ಯ ಸೇವಿಸಿದ್ದ ಇಬ್ಬರು ಯುವಕರು ಚಲಾಯಿಸುತ್ತಿದ್ದ ಕಾರು ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ. ಬಳಿಕ ಕಾರು ಆಕೆಯ ಮೇಲೆ ಹರಿದ ಪರಿಣಾಮ, 28 ವರ್ಷದ ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿನಿ ಮೃತಪಟ್ಟಿದ್ದಾರೆ ಎನ್ನುವ ವಿಷಯ ಇದೀಗ ಬೆಳಕಿಗೆ ಬಂದಿದೆ.ಇಬ್ಬರು ಯುವಕರು ಮದ್ಯ ಸೇವಿಸಿದ ಮತ್ತಿನಲ್ಲಿ ಈ ಭೀಕರ ಅಪಘಾತವನ್ನು ಮಾಡಿದ್ದಾರೆ. ರಾಜಮಂಡ್ರಿಯಲ್ಲಿ ಸಂಭವಿಸಿದ ಭೀಕರ ಅಪಘಾತವು 28 ವರ್ಷದ ಪಿಜಿ ವೈದ್ಯಕೀಯ ವಿದ್ಯಾರ್ಥಿನಿ ಭೀಕರವಾಗಿ ಗಾಯಗೊಂಡು ಸಾವನ್ನಪ್ಪಿದ್ದಾರೆ. ಈ ತಿಂಗಳ ಆರಂಭದಲ್ಲಿ ಭೀಕರ ಘಟನೆ ನಡೆದಿದ್ದರೂ ತಡವಾಗಿ ಬೆಳಕಿಗೆ ಬಂದಿದೆ. ಪೂರ್ವ ಗೋದಾವರಿ ಜಿಲ್ಲೆಯ ರಾಜಮಂಡ್ರಿಯ ಜನಪ್ರಿಯ ಶಾಪಿಂಗ್ ಮಾಲ್ ಬಳಿ ಈ ಅಪಘಾತ ಸಂಭವಿಸಿತ್ತು. ಇಬ್ಬರು ಯುವಕರು ಚಲಾಯಿಸುತ್ತಿದ್ದ ಕಾರು ಸ್ಕೂಟರ್‌ಗೆ ಡಿಕ್ಕಿ ಹೊಡೆದು 28 ವರ್ಷದ ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿನಿ ಸಾವನ್ನಪ್ಪಿದ್ದರು.ಅಪಘಾತದಲ್ಲಿ ಮೃತಪಟ್ಟ ಯುವತಿಯನ್ನು ಇಲ್ಲಿನ GSL ವೈದ್ಯಕೀಯ ಕಾಲೇಜಿನಲ್ಲಿ ಚರ್ಮರೋಗ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆಯುತ್ತಿದ್ದ 28 ವರ್ಷದ ವಿದ್ಯಾರ್ಥಿನಿ ಡಾ. ಪ್ರಿಯಾಂಕಾ ಎಂದು ಗುರುತಿಸಲಾಗಿದೆ. ಆಗಸ್ಟ್ 3ರಂದು ಪ್ರಕಾಶ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ದುರಂತ ಘಟನೆ ನಡೆದಿದೆ.ಪ್ರಾಥಮಿಕ ವರದಿಗಳ ಪ್ರಕಾರ, ಡಾ. ಪ್ರಿಯಾಂಕಾ ತನ್ನ ಸ್ಕೂಟಿಯಲ್ಲಿ ಪ್ರಸಾದಿತ್ಯ ಮಾಲ್ ಆವರಣದಿಂದ ಎವಿ ಅಪ್ಪಾ ರಾವ್ ರಸ್ತೆಗೆ ಹೋಗುತ್ತಿದ್ದಾಗ ಹಿಂದಿನಿಂದ ಬಂದ ವೇಗವಾಗಿ ಬಂದ ಕಾರು ಅವರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಕಾರು ಡಿಕ್ಕಿಯಾದ ರಭಸಕ್ಕೆ ಅವರು ಸ್ಕೂಟರ್‌ನಿಂದ ಕೆಳಗೆ ಬಿದ್ದಿದ್ದು, ಕಾರು ವೇಗವಾಗಿ ಚಲಿಸುವ ಮೊದಲು ಅವರ ತಲೆಯ ಮೇಲೆ ಹರಿದಿದೆ ಎಂದು ವರದಿಯಾಗಿದೆ.ಭೀಕರ ಅಪಘಾತ – ಪೊಲೀಸರಿಂದ ಗಂಭೀರ ಕ್ರಮಇನ್ನು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಡಾ. ಪ್ರಿಯಾಂಕಾ ಅವರನ್ನು ತಕ್ಷಣ ತುರ್ತು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಆದರೆ, ತೀವ್ರ ಆಘಾತದಿಂದಾಗಿ ಅವರ ಮೆದುಳು ಗಂಭೀರವಾಗಿ ಗಾಯಗೊಂಡಿದ್ದುಮ ಅವರು ಸಾವನ್ನಪ್ಪಿದ್ದಾರೆ ಎಂದು ವೈದ್ಯರು ಘೋಷಿಸಿದ್ದರು.ತೀವ್ರ ವೈದ್ಯಕೀಯ ಪ್ರಯತ್ನದ ಹೊರತಾಗಿಯೂ ಸಿಕಂದರಾಬಾದ್‌ನ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವಾಗ ಅವರು ಸಾವನ್ನಪ್ಪಿದ್ದರು. ಅಪಘಾತದ ಸಮಯದಲ್ಲಿ ಕಾರಿನಲ್ಲಿದ್ದ ಇಬ್ಬರು ಯುವಕರು ತೀವ್ರ ಮದ್ಯದ ಪ್ರಭಾವದಿಂದ ಅತಿವೇಗದ ಚಾಲನೆ ಮಾಡುತ್ತಿದ್ದರು ಎಂದು ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಬಹಿರಂಗವಾಗಿದೆ.










