ಮೂಡುಬಿದಿರೆ: ಮಿಜಾರ್ ಸಮೀಪ ಬಾಡಿಗೆ ಮನೆಯೊಂದರಲ್ಲಿ ಅಡುಗೆ ಅನಿಲ ಸಿಲಿಂಡರ್ ಸ್ಫೋಟಗೊಂಡು ದಂಪತಿ ಸಹಿತ ಆರು ವರ್ಷದ ಬಾಲಕ ಗಾಯಗೊಂಡ ಘಟನೆ ಮಂಗಳವಾರ ಬೆಳಗ್ಗೆ ನಡೆದಿದೆ.ಆಳ್ವಾಸ್ ಕಾಲೇಜಿನಲ್ಲಿ ವಾಚ್‌ಮನ್ ಆಗಿ ಕೆಲಸ ಮಾಡುತ್ತಿರುವ ಶಿವರಾಮ (31), ಅವರ ಪತ್ನಿ ಗಂಗಾ (25) ಹಾಗೂ ಪುತ್ರ ಆದರ್ಶ್ (6) ಗಾಯಗೊಂಡವರು. ಬೆಳಗ್ಗೆ ಸುಮಾರು 6.30ಕ್ಕೆ ಸಿಲಿಂಡರ್ ಸ್ಫೋಟಗೊಂಡಿದ್ದು, ಮೂವರಿಗೂ ಸುಟ್ಟ ಗಾಯಗಳಾಗಿವೆ. ಶಿವರಾಮ ಅವರಿಗೆ ತೀವ್ರ ಸ್ವರೂಪದ ಸುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ.ಮೂಡುಬಿದಿರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.










