ಬಂಟ್ವಾಳ: ಕಲ್ಲಡ್ಕದಲ್ಲಿ ಆ.13ರಂದು ವಾಹನ ಜಾಥಾ ನಡೆಯಲಿದೆ ಎಂಬ ಪೋಸ್ಟರ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಸದ್ರಿ ಕಾರ್ಯಕ್ರಮಕ್ಕೆ ಪೊಲೀಸ್ ಇಲಾಖೆಯಿಂದ ಯಾವುದೇ ಪೂರ್ವಾನುಮತಿ ನೀಡಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.ಸಾರ್ವಜನಿಕರು ಹಾಗೂ ವಾಹನಗಳ ಸುಗಮ ಸಂಚಾರಕ್ಕೆ ಅಡ್ಡಿಯಾಗುವ ರೀತಿಯಲ್ಲಿ ಅಥವಾ ಪೂರ್ವಾನುಮತಿ ಪಡೆಯದೆ ವಾಹನ ಜಾಥಾ ಸೇರಿದಂತೆ ಯಾವುದೇ ಕಾರ್ಯಕ್ರಮ ಆಯೋಜಿಸಿದಲ್ಲಿ ಸಂಬಂಧಪಟ್ಟವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಇಲಾಖೆ ಎಚ್ಚರಿಕೆ ನೀಡಿದೆ.ಸಾರ್ವಜನಿಕರು ಯಾವುದೇ ಕಾರ್ಯಕ್ರಮದಲ್ಲಿ ಭಾಗವಹಿಸುವ ಮುನ್ನ, ಸಂಬಂಧಪಟ್ಟ ಇಲಾಖೆಯಿಂದ ಅಗತ್ಯ ಪೂರ್ವಾನುಮತಿ ಪಡೆಯಲಾಗಿದೆಯೇ ಎಂಬುದನ್ನು ಖಚಿತಪಡಿಸಿಕೊಂಡು ಪಾಲ್ಗೊಳ್ಳುವಂತೆ ಪೊಲೀಸ್ ಇಲಾಖೆ ಮನವಿ ಮಾಡಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!