ಪುತ್ತೂರು : ಪುತ್ತೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಕ್ಲೀಪರ್ ಬಸ್‌ವೊಂದು ರಸ್ತೆ ಬದಿಯ ಮಣ್ಣಿನಲ್ಲಿ ಹೂತು ವಾಲಿ ನಿಂತ ಘಟನೆ ಆ.11ರ ರಾತ್ರಿ ಪುತ್ತೂರು-ಉಪ್ಪಿನಂಗಡಿ ರಸ್ತೆಯ ಸೇಡಿಯಾಪು ಬಳಿ ನಡೆದಿದೆ.ಪುತ್ತೂರು ಬಸ್ ನಿಲ್ದಾಣದಿಂದ ಬೆಂಗಳೂರಿನತ್ತ ತೆರಳುತ್ತಿದ್ದ ಬಸ್, ಸೇಡಿಯಾಪು ಬಳಿ ಚತುಷ್ಪಥ ರಸ್ತೆ ಕಾಮಗಾರಿ ನಡೆಯುತ್ತಿದ್ದ ವೇಳೆ ಎದುರಿನಿಂದ ಬಂದ ವಾಹನಕ್ಕೆ ದಾರಿ ಮಾಡಿಕೊಡಲು ರಸ್ತೆ ಬದಿಗೆ ಸರಿದಿದೆ. ಈ ಸಂದರ್ಭ ಗಟ್ಟಿಯಾಗದ ಮಣ್ಣಿನಲ್ಲಿ ಬಸ್‌ನ ಚಕ್ರಗಳು ಹೂತುಹೋಗಿ, ಬಸ್ ಒಂದು ಬದಿಗೆ ವಾಲಿ ನಿಂತಿದೆ.ರಸ್ತೆ ಕಾಮಗಾರಿ ಸ್ಥಳದಲ್ಲಿ ಸೂಕ್ತ ಸುರಕ್ಷತಾ ಕ್ರಮ, ಸೂಚನಾ ಫಲಕ ಹಾಗೂ ರಿಫ್ಲೆಕ್ಟರ್‌ಗಳನ್ನು ಅಳವಡಿಸದಿರುವುದು ಅಪಾಯಕ್ಕೆ ಕಾರಣವಾಗುತ್ತಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾತ್ರಿ ವೇಳೆ ಇಂತಹ ಘಟನೆಗಳು ಮರುಕಳಿಸುವ ಮುನ್ನ ಕಾಮಗಾರಿ ಪ್ರದೇಶದಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.










