ಕಡಬ: ಕುಂಡಡ್ಕ ಪಾಲ್ಸ್‌ಗೆ ತೆರಳಿದ್ದ ಪರಿಶಿಷ್ಟ ಪಂಗಡಕ್ಕೆ ಸೇರಿದ ಅಪ್ರಾಪ್ತ ಬಾಲಕ ಹಾಗೂ ಆತನ ಇಬ್ಬರು ಸಹಪಾಠಿಗಳ ಮೇಲೆ ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿದ ಆರೋಪದಡಿ ಐವರ ವಿರುದ್ಧ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಆ.3ರಂದು ಬೆಳಿಗ್ಗೆ ಅಪ್ರಾಪ್ತ ಬಾಲಕನು ತನ್ನ ನಾಲ್ವರು ಸಹಪಾಠಿಗಳೊಂದಿಗೆ ಕುಂಡಡ್ಕ ಪಾಲ್ಸ್‌ಗೆ ತೆರಳಿ ಆಟವಾಡುತ್ತಿದ್ದ ವೇಳೆ ಆರೋಪಿಗಳಾದ ರೋಹಿತ್, ದೇವಿಪ್ರಸಾದ್, ಚಂದನ್, ಉಮೇಶ್ ಹಾಗೂ ವಿದ್ಯಾರ್ಥಿನಿಯೊಬ್ಬಳ ತಂದೆ ಸ್ಥಳಕ್ಕೆ ಬಂದಿದ್ದರು ಎನ್ನಲಾಗಿದೆ.ಈ ವೇಳೆ ಆರೋಪಿಗಳು ಬಾಲಕನಿಗೆ ಅವಾಚ್ಯವಾಗಿ ಬೈದು, ಆತನಿಗೆ ಹಾಗೂ ಇಬ್ಬರು ಸಹಪಾಠಿ ಬಾಲಕರಿಗೆ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ಆ.11ರಂದು ಕಡಬ ಠಾಣೆಗೆ ದೂರು ನೀಡಲಾಗಿದೆ.ದೂರಿನ ಆಧಾರದಲ್ಲಿ ಕಡಬ ಪೊಲೀಸ್ ಠಾಣೆಯಲ್ಲಿ ಅ.ಕ್ರ. 97/2026ರಂತೆ ಬಿಎನ್‌ಎಸ್‌ನ ವಿವಿಧ ಕಲಂಗಳ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.










