ಪುತ್ತೂರು: ವಿಶ್ವ ಹಿಂದೂ ಪರಿಷತ್‌–ಬಜರಂಗದಳ ಪುತ್ತೂರು ಇದರ ಸೇವಾ ಪ್ರಕಲ್ಪವಾದ ‘ವಜ್ರತೇಜಸ್’ ಹಿಂದೂ ಕವಚ್ ವಾಟ್ಸ್‌ಆಪ್ ಗ್ರೂಪ್‌ನಲ್ಲಿ ಸಂಗ್ರಹಿಸಲಾದ ಮೊತ್ತದಿಂದ ಇತ್ತೀಚೆಗೆ ಅನಾರೋಗ್ಯದಿಂದ ಮೃತಪಟ್ಟ ವೀರಮಂಗಲ ನಿವಾಸಿ ಸತೀಶ್ ಕುಮಾರ್ ಅವರ ಕುಟುಂಬಕ್ಕೆ ಸಹಾಯಧನ ನೀಡಲಾಯಿತು.ಸತೀಶ್ ಕುಮಾರ್ ಅವರು ಮೃತಪಟ್ಟ ಹಿನ್ನೆಲೆಯಲ್ಲಿ ಕುಟುಂಬವು ಮನೆಯ ಆಧಾರಸ್ತಂಭವನ್ನು ಕಳೆದುಕೊಂಡು ಸಂಕಷ್ಟದಲ್ಲಿರುವುದನ್ನು ಅರಿತು, ‘ವಜ್ರತೇಜಸ್’ ತಂಡದ ಸದಸ್ಯರು ಮನೆಗೆ ಭೇಟಿ ನೀಡಿ ಕುಟುಂಬದವರಿಗೆ ಸಹಾಯಧನ ಹಸ್ತಾಂತರಿಸಿದರು.ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್ ಪುತ್ತೂರು ಜಿಲ್ಲಾ ಸಹ ಕಾರ್ಯದರ್ಶಿ ಶ್ರೀಧರ್ ತೆಂಕಿಲ, ಪುತ್ತೂರು ನಗರ ಪ್ರಖಂಡ ಅಧ್ಯಕ್ಷ ದಾಮೋದರ ಪಾಟಲಿ ಹಾಗೂ ಬಜರಂಗದಳ ಗ್ರಾಮಾಂತರ ಪ್ರಖಂಡ ಗೋರಕ್ಷಾ ಪ್ರಮುಖ್ ಪ್ರದೀಪ್ ಅಜಲಡ್ಕ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

Join WhatsApp Group
error: Content is protected !!