ಕಡಬ: ಕಾಲೇಜು ವಿದ್ಯಾರ್ಥಿನಿಯೊಬ್ಬಳನ್ನು ಪ್ರೀತಿಸುವಂತೆ ಒತ್ತಾಯಿಸಿ ನಿರಂತರವಾಗಿ ಹಿಂಬಾಲಿಸಿ ಕಿರುಕುಳ ನೀಡಿದ ಆರೋಪದ ಮೇಲೆ ಯುವಕನ ವಿರುದ್ಧ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಕಡಬ ತಾಲೂಕಿನ ಚಾರ್ವಾಕ ಗ್ರಾಮದ ಪದ್ಮನಾಭ ಎಂಬಾತ ಪ್ರಕರಣದ ಆರೋಪಿಯಾಗಿದ್ದಾನೆ. 18 ವರ್ಷದ ಕಾಲೇಜು ವಿದ್ಯಾರ್ಥಿನಿ ಮನೆಗೆ ತೆರಳುವ ವೇಳೆ ಆರೋಪಿ ನಿರಂತರವಾಗಿ ಹಿಂಬಾಲಿಸುತ್ತಿದ್ದ ಎನ್ನಲಾಗಿದೆ. ಈ ಬಗ್ಗೆ ಯುವತಿಯ ಮನೆಯವರು ಎಚ್ಚರಿಕೆ ನೀಡಿದರೂ ಆರೋಪಿ ತನ್ನ ವರ್ತನೆಯನ್ನು ಮುಂದುವರಿಸಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.ಜುಲೈ 29ರಂದು ಯುವತಿ ಕಾಲೇಜಿನಿಂದ ಮನೆಗೆ ಬರುತ್ತಿದ್ದ ವೇಳೆ ಆರೋಪಿ ಮತ್ತೆ ಆಕೆಯನ್ನು ಹಿಂಬಾಲಿಸಿ, ಯುವತಿಯ ತಾಯಿ ಹಾಗೂ ಅಕ್ಕನಿಗೆ ಕೇಳಿಸುವಂತೆ ಕೊಲೆ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ. ಬಳಿಕ ಆಗಸ್ಟ್ 10ರಂದು ಮತ್ತೆ ಯುವತಿಯನ್ನು ಹಿಂಬಾಲಿಸಿ, ಆಕೆಯ ಅಕ್ಕನಿಗೆ ಕರೆ ಮಾಡಿ ಬೆದರಿಕೆ ಹಾಕಿದ್ದಾನೆ ಎಂದು ದೂರಲಾಗಿದೆ.ಈ ಕುರಿತು ಯುವತಿ ಆಗಸ್ಟ್ 11ರಂದು ಕಡಬ ಪೊಲೀಸ್ ಠಾಣೆಗೆ ದೂರು ನೀಡಿದ್ದು, ದೂರಿನ ಆಧಾರದ ಮೇಲೆ ಪೊಲೀಸರು BNS ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!