ಪುತ್ತೂರು: ವಿದ್ಯಾರ್ಥಿಗಳಲ್ಲಿ ದೇಶಪ್ರೇಮ ಹಾಗೂ ಸಾಮಾನ್ಯ ಜ್ಞಾನವನ್ನು ಬೆಳೆಸುವ ಉದ್ದೇಶದಿಂದ ನಯಾ ಚಪ್ಪಲ್ ಬಜಾರ್ ವತಿಯಿಂದ ಆಯೋಜಿಸಲಾಗಿದ್ದ ‘ಸ್ವಾತಂತ್ರೋತ್ಸವ ರಸಪ್ರಶ್ನೆ ಸ್ಪರ್ಧೆ–2026’ರ ಫಲಿತಾಂಶ ಮತ್ತು ಬಹುಮಾನ ವಿತರಣೆ ಕಾರ್ಯಕ್ರಮ ಆ.15ರಂದು ಪುತ್ತೂರಿನ ಬುಶ್ರಾ ಟವರ್‌ನಲ್ಲಿರುವ ಮಳಿಗೆಯಲ್ಲಿ ನಡೆಯಲಿದೆ.1ನೇ ತರಗತಿಯಿಂದ ಎಸ್‌ಎಸ್‌ಎಲ್‌ಸಿ ವರೆಗಿನ ವಿದ್ಯಾರ್ಥಿಗಳಿಗಾಗಿ ‘ಕಲಿಯೋಣ, ಸ್ಪರ್ಧಿಸೋಣ, ದೇಶಪ್ರೇಮ ಮೆರೆಯೋಣ’ ಎಂಬ ಆಶಯದೊಂದಿಗೆ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಸ್ಪರ್ಧೆಯಲ್ಲಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನಗಳೊಂದಿಗೆ ಏಳು ಆಕರ್ಷಕ ಬಹುಮಾನಗಳನ್ನು ನೀಡಲಾಗುತ್ತದೆ.ಕಾರ್ಯಕ್ರಮದಲ್ಲಿ ಇನ್ನರ್ ವೀಲ್ ಕ್ಲಬ್ ಪುತ್ತೂರು ಅಧ್ಯಕ್ಷೆ ಮನೋರಮಾ ಸೂರ್ಯ, ರೋಟರಿ ಕ್ಲಬ್ ಪುತ್ತೂರು ಅಧ್ಯಕ್ಷ ಪ್ರೊ. ದತ್ತಾತ್ರೇಯ ರಾವ್, ರೋಟರಿ ಕ್ಲಬ್ ಪುತ್ತೂರು ಎಲೈಟ್ ಅಧ್ಯಕ್ಷ ಮೊಹಮ್ಮದ್ ಶಾಕೀರ್ ಹಾಗೂ ರೋಟರಿ ಕ್ಲಬ್ ಪುತ್ತೂರು ಸದಸ್ಯ ಹೆರಾಲ್ಡ್ ಮಾಡ್ತಾ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.ಪುತ್ತೂರು ಮುಖ್ಯ ರಸ್ತೆಯ ಬುಶ್ರಾ ಟವರ್‌ನಲ್ಲಿರುವ ನಯಾ ಚಪ್ಪಲ್ ಬಜಾರ್‌ನಲ್ಲಿ ಕಾರ್ಯಕ್ರಮ ನಡೆಯಲಿದ್ದು, ಹೆಚ್ಚಿನ ಮಾಹಿತಿಗಾಗಿ 9448123569 ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.










