ಪುತ್ತೂರು: ಕೆಯ್ಯೂರು ಗ್ರಾಮದ ಬೊಳಿಕ್ಕಳ ನೆಲ್ಲಿಗುರಿ ಬಳಿ ಆ.15ರಂದು ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.ಮೃತರನ್ನು ಅಭಿಲಾಷ್ ಎಂದು ಗುರುತಿಸಲಾಗಿದೆ.ಮಾಡಾವು ಕಟ್ಟೆಯಿಂದ ಸವಣೂರು ಕಡೆಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಸವಣೂರಿನಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಸ್ಥಳಕ್ಕೆ ಪುತ್ತೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಮೃತರು ತಂದೆ, ತಾಯಿ ಹಾಗೂ ಸಹೋದರನನ್ನು ಅಗಲಿದ್ದಾರೆ.










