ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಶಾಗ್ಯ ವ್ಯಾಪ್ತಿಯ ದಟ್ಟಿ ಅರಣ್ಯ ಪ್ರದೇಶದಲ್ಲಿ ಅರಣ್ಯ ಸಿಬ್ಬಂದಿ ಹಾಗೂ ಕಾಡುಗಳ್ಳರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಮೂವರು ಬೇಟೆಗಾರರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ದಟ್ಟಿ ಅರಣ್ಯ ಪ್ರದೇಶದಲ್ಲಿ ಕಾಡುಪ್ರಾಣಿಗಳನ್ನು ಬೇಟೆಯಾಡಿ ಮಾಂಸ ಬೇರ್ಪಡಿಸುತ್ತಿದ್ದ ವೇಳೆ ಅರಣ್ಯ ಸಿಬ್ಬಂದಿ ದಾಳಿ ನಡೆಸಿದ್ದಾರೆ ಎನ್ನಲಾಗಿದೆ.ಈ ಸಂದರ್ಭದಲ್ಲಿ ಸಿಬ್ಬಂದಿ ಶಸ್ತ್ರಾಸ್ತ್ರ ಕೆಳಗಿಟ್ಟು ಶರಣಾಗುವಂತೆ ಸೂಚಿಸಿದ್ದಾರೆ. ಆದರೆ ಕಾಡುಗಳ್ಳರು ಅರಣ್ಯ ಸಿಬ್ಬಂದಿಯತ್ತ ಗುಂಡು ಹಾರಿಸಿದ್ದಾರೆ ಎಂದು ವರದಿಯಾಗಿದೆ.ಇದಕ್ಕೆ ಪ್ರತಿಯಾಗಿ ಅರಣ್ಯ ಸಿಬ್ಬಂದಿ ಕೌಂಟರ್ ಫೈರಿಂಗ್ ನಡೆಸಿದ್ದು, ಗುಂಡೇಟಿಗೆ ಮೂವರು ಬೇಟೆಗಾರರು ಮೃತಪಟ್ಟಿದ್ದಾರೆ. ಮೃತರನ್ನು ಹನೂರು ತಾಲೂಕಿನ ತೋಮಿಯಾರ್ ಪಾಳ್ಯದ ಕುಮಾರ್, ಅಂತೋನಿ ಸ್ವಾಮಿ ಹಾಗೂ ಪೀಟರ್ ಎಂದು ಗುರುತಿಸಲಾಗಿದೆ ಎಂದು ಮೂಲ ವರದಿ ತಿಳಿಸಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!