ಪುತ್ತೂರು: ಮುಳಿಯ ಗೋಲ್ಡ್ & ಡೈಮಂಡ್ಸ್‌ನ ಪುತ್ತೂರು ಶಾಖೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮ ಹಾಗೂ ದೇಶಭಕ್ತಿಯೊಂದಿಗೆ ಆಚರಿಸಲಾಯಿತು.ನಿವೃತ್ತ ಎನ್‌ಸಿಸಿ ಅಧಿಕಾರಿ ಕ್ಯಾಪ್ಟನ್ ಮಹೇಶ್ ರೈ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರ ತ್ಯಾಗ, ಬಲಿದಾನ ಹಾಗೂ ದೇಶಪ್ರೇಮವನ್ನು ಸ್ಮರಿಸಿದರು. ಯುವಜನತೆ ಜವಾಬ್ದಾರಿಯುತ ನಾಗರಿಕರಾಗಿ ರಾಷ್ಟ್ರದ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ನೀಡಬೇಕು ಎಂದು ಕರೆ ನೀಡಿದರು.ಸಂಸ್ಥೆಯ ಆಡಳಿತ ನಿರ್ದೇಶಕ ಕೃಷ್ಣ ನಾರಾಯಣ ಮುಳಿಯ ಮಾತನಾಡಿ, ಸ್ವಾತಂತ್ರ್ಯಾನಂತರ ಭಾರತವು ವಿವಿಧ ಕ್ಷೇತ್ರಗಳಲ್ಲಿ ಸಾಧಿಸಿರುವ ಪ್ರಗತಿ ಹಾಗೂ ಅಭಿವೃದ್ಧಿಯ ಪಯಣವನ್ನು ಸ್ಮರಿಸಿದರು. ದೇಶದ ಅಭಿವೃದ್ಧಿಯಲ್ಲಿ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ ಮಹತ್ವದ್ದಾಗಿದೆ ಎಂದು ತಿಳಿಸಿದರು.ಈ ಸಂದರ್ಭದಲ್ಲಿ ಸಂಸ್ಥೆಯ ಆಡಳಿತ ನಿರ್ದೇಶಕಿ ಅಶ್ವಿನಿ ಕೃಷ್ಣ ಮುಳಿಯ, ಶಾಖಾ ಪ್ರಬಂಧಕ ರಾಘವೇಂದ್ರ ಪಟೇಲ್ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಕಾರ್ಯಕ್ರಮದ ಅಂಗವಾಗಿ ಸಿಬ್ಬಂದಿಗೆ ಸಿಹಿ ಹಂಚಿ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.

Leave a Reply

Your email address will not be published. Required fields are marked *

Join WhatsApp Group
error: Content is protected !!