ಬೆಳ್ತಂಗಡಿ: ಮನೆಯಲ್ಲಿ ಒಬ್ಬರೇ ಇದ್ದ 82 ವರ್ಷದ ವೃದ್ಧೆಯ ಕೈಯಲ್ಲಿದ್ದ ಸುಮಾರು ₹5 ಲಕ್ಷ ಮೌಲ್ಯದ ಚಿನ್ನದ ಬಳೆಗಳನ್ನು ಅಪರಿಚಿತ ವ್ಯಕ್ತಿಯೊಬ್ಬ ಬಲವಂತವಾಗಿ ಎಳೆದುಕೊಂಡು ಪರಾರಿಯಾದ ಘಟನೆ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ತೆಂಕಕಜೆಕಾರು ಗ್ರಾಮದ ಉದ್ದದ ಗುಡ್ಡೆಯಲ್ಲಿ ಆ.14ರಂದು ನಡೆದಿದೆ.ಉದ್ದದ ಗುಡ್ಡೆ ನಿವಾಸಿ ಅವ್ವಮ್ಮ (82) ಅವರು ಮನೆಯಲ್ಲಿ ಒಬ್ಬರೇ ಇದ್ದ ವೇಳೆ ಬೆಳಗ್ಗೆ 11.30ರಿಂದ ಮಧ್ಯಾಹ್ನ 12.30ರ ನಡುವಿನ ಅವಧಿಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಮನೆಗೆ ಪ್ರವೇಶಿಸಿದ್ದಾನೆ ಎನ್ನಲಾಗಿದೆ.ಆರೋಪಿ, ಅವ್ವಮ್ಮ ಅವರ ಎರಡೂ ಕೈಗಳಲ್ಲಿದ್ದ ಸುಮಾರು 40 ಗ್ರಾಂ ತೂಕದ ಎರಡು ಚಿನ್ನದ ಬಳೆಗಳನ್ನು ಬಲವಂತವಾಗಿ ಎಳೆದುಕೊಂಡು ಪರಾರಿಯಾಗಿದ್ದಾನೆ. ಬಳೆಗಳನ್ನು ಎಳೆಯುವ ಸಂದರ್ಭದಲ್ಲಿ ವೃದ್ಧೆಯ ಎಡಕೈಗೆ ರಕ್ತಗಾಯವಾಗಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ.ಘಟನೆಗೆ ಸಂಬಂಧಿಸಿ ಅವ್ವಮ್ಮ ಅವರ ಪುತ್ರ ಸಾದಿಕ್ (45) ನೀಡಿದ ದೂರಿನ ಆಧಾರದ ಮೇಲೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ BNS-2023ರ ಕಲಂ 309(6)ರ ಅಡಿಯಲ್ಲಿ ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!