ಉಪ್ಪಿನಂಗಡಿ: ಕಡಬ ಠಾಣಾ ವ್ಯಾಪ್ತಿಯ 18 ವರ್ಷದ ಯುವತಿ ನೀಡಿದ ದೂರಿನ ಮೇರೆಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ 9 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ.ದೂರಿನ ಪ್ರಕಾರ, ಆ.12ರಂದು ಕೆಲಸ ಮುಗಿಸಿ ರಾತ್ರಿ ಫಾಯಿಝಾ ಅವರು ಪರಿಚಿತರಾದ ಸಿಪ್ನಾನ್‌, ಝಾಹಿರ್‌ ಹಾಗೂ ಸಫಿಯಾ ಅವರೊಂದಿಗೆ ಕಾರಿನಲ್ಲಿ ಮನೆಗೆ ಬಂದಿದ್ದರು. ಫಾಯಿಝಾ ಅವರನ್ನು ಮನೆಗೆ ಬಿಟ್ಟು ಉಳಿದ ಮೂವರು ಕಡಬದ ಕೊಣಾಲು ಕೋಲ್ಪೆ ಕಡೆಗೆ ತೆರಳುತ್ತಿದ್ದ ವೇಳೆ ಜಾಬಿರ್‌, ಸಿದ್ದೀಕ್‌, ಉನೈಸ್‌, ರಂಶಿಕ್‌, ಸಂಶುದ್ದೀನ್‌, ಜಾಫರ್‌, ಆಶಿತ್‌, ಆಚೂರು ಅಲಿಯಾಸ್ ಅಶ್ರಫ್‌ ಹಾಗೂ ಅಶ್ರಫ್‌ ಕೋಲ್ಪೆ ಎಂಬವರು ಕಾರನ್ನು ಅಕ್ರಮವಾಗಿ ತಡೆದಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.ಆರೋಪಿಗಳು ಅವಾಚ್ಯ ಶಬ್ದಗಳಿಂದ ಬೈದು, ಬಳಿಕ ಸ್ಥಳಕ್ಕೆ ಬಂದ ಫಾಯಿಝಾ, ಜಮಾಲ್‌ ಹಾಗೂ ಫಾಯಿಝಾ ಅವರ ತಂಗಿಗೂ ಅವಾಚ್ಯವಾಗಿ ಬೈದು ಹಲ್ಲೆ ನಡೆಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.ಈ ಸಂಬಂಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ. 107/2026ರಂತೆ ಭಾರತೀಯ ನ್ಯಾಯ ಸಂಹಿತೆಯ ಕಲಂ 189(2), 191(2), 126(2), 352, 115(2), 351(2) ಜೊತೆಗೆ 190ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!