ಪುತ್ತೂರು: ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆ ಹಾಗೂ ಪ್ರಗತಿ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್ ವತಿಯಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಆ.15ರಂದು ಸಂಭ್ರಮದಿಂದ ಆಚರಿಸಲಾಯಿತು.ಪ್ರಗತಿ ಹಾಸ್ಪಿಟಲ್ ಎಜುಕೇಶನ್ ಟ್ರಸ್ಟ್ (ಆರ್), ಪುತ್ತೂರು ಅಧ್ಯಕ್ಷ ಹಾಗೂ ವ್ಯವಸ್ಥಾಪಕ ಟ್ರಸ್ಟಿ ಡಾ. ಯು. ಶ್ರೀಪತಿ ರಾವ್ ಅವರು ಧ್ವಜಾರೋಹಣ ನೆರವೇರಿಸಿದರು. ಮಾಜಿ ಸೈನಿಕ ಹಾಗೂ ಮಾಜಿ ಭಾರತೀಯ ವಾಯುಪಡೆ (IAF) ಸಿಬ್ಬಂದಿ ಸುಧಾಕರ ಕೆ. ನಿಡುವಣ್ಣಾಯ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಶುಭ ಹಾರೈಸಿದರು.ಪ್ರಗತಿ ಹಾಸ್ಪಿಟಲ್ ಎಜುಕೇಶನ್ ಟ್ರಸ್ಟ್‌ನ ವ್ಯವಸ್ಥಾಪಕ ಟ್ರಸ್ಟಿ ಡಾ. ಸುಧಾ ಎಸ್. ರಾವ್ ಉಪಸ್ಥಿತರಿದ್ದರು. ಪ್ರಗತಿ ಕಾಲೇಜ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್‌ನ ಪ್ರಾಂಶುಪಾಲೆ ಮನಸಾ ಪಿ., ಪ್ರಗತಿ ಕಾಲೇಜ್ ಆಫ್ ನರ್ಸಿಂಗ್ ಸೈನ್ಸಸ್‌ನ ಪ್ರಾಂಶುಪಾಲೆ ಪ್ರೊ. ಹೇಮಲತಾ ಜಿ., ಆಡಳಿತಾಧಿಕಾರಿ ಪ್ರೀತಾ ಹೆಗ್ಡೆ, ಟ್ರಸ್ಟಿಗಳು, ಸಿಬ್ಬಂದಿ, ವಿದ್ಯಾರ್ಥಿಗಳು ಹಾಗೂ ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.ಕಾರ್ಯಕ್ರಮದಲ್ಲಿ ಸ್ವಾತಂತ್ರ್ಯದ ಮಹತ್ವವನ್ನು ಸ್ಮರಿಸಲಾಯಿತು. ದೇಶದ ಸ್ವಾತಂತ್ರ್ಯ ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಗೌರವಿಸುವ ಸಂಕಲ್ಪದೊಂದಿಗೆ ಎಲ್ಲರೂ ಒಗ್ಗೂಡಿ ಸ್ವಾತಂತ್ರ್ಯೋತ್ಸವವನ್ನು ಆಚರಿಸಿದರು.

Leave a Reply

Your email address will not be published. Required fields are marked *

Join WhatsApp Group
error: Content is protected !!