ಪುತ್ತೂರು: ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಪುತ್ತೂರಿನ ಮೆಡ್ ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಧುಮೇಹ ತಪಾಸಣೆ, ಉಚಿತ ಫ್ಯಾಟಿ ಲಿವರ್ ತಪಾಸಣೆ (ಫೈಬ್ರೋಸ್ಕ್ಯಾನ್) ಹಾಗೂ ಉಚಿತ ಕಿವಿ ತಪಾಸಣಾ ಶಿಬಿರ ಯಶಸ್ವಿಯಾಗಿ ನಡೆಯಿತು.ಶಿಬಿರದಲ್ಲಿ ಮಧುಮೇಹ ತಪಾಸಣೆಯ ಭಾಗವಾಗಿ HbA1c ಪರೀಕ್ಷೆಯನ್ನೂ ನಡೆಸಲಾಯಿತು. ಮೆಡ್ ಲ್ಯಾಂಡ್ ಆಸ್ಪತ್ರೆಯ ಮೆಡಿಕಲ್ ಸೂಪರಿಂಟೆಂಡೆಂಟ್ ಡಾ. ವಿಶಾಲ್ ಯು.ಪಿ. ಹಾಗೂ ಮಧುಮೇಹ ತಜ್ಞೆ ಡಾ. ಸ್ವಾತಿ ಪಿ. ಅವರು ಸಂದರ್ಶಕ ವೈದ್ಯರಾಗಿ ಸೇವೆ ಸಲ್ಲಿಸಿದರು.ಶಿಬಿರದಲ್ಲಿ ನೂರಕ್ಕೂ ಅಧಿಕ ಫಲಾನುಭವಿಗಳು ಭಾಗವಹಿಸಿ ಆರೋಗ್ಯ ತಪಾಸಣೆಯ ಪ್ರಯೋಜನ ಪಡೆದರು. ಆಸ್ಪತ್ರೆಯ ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ಸಹಕರಿಸಿದರು. ಪಿ.ಸಿ.ಸಿ. ಅಖಿಲ್ ವೈ. ಕಾರ್ಯಕ್ರಮ ನಿರ್ವಹಿಸಿದರು.

Leave a Reply

Your email address will not be published. Required fields are marked *

Join WhatsApp Group
error: Content is protected !!