ವಿಟ್ಲ: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿ ಬೆದರಿಕೆ ಹಾಕಿದ ಆರೋಪದ ಮೇಲೆ ವಿಟ್ಲ ಪೊಲೀಸರು 53 ವರ್ಷದ ವ್ಯಕ್ತಿಯೊಬ್ಬರನ್ನು ಬಂಧಿಸಿದ್ದಾರೆ.ಆ.15ರಂದು ಅಳಿಕೆಯಿಂದ ಪುತ್ತೂರು ಕಡೆಗೆ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಅಪ್ರಾಪ್ತ ಬಾಲಕನ ಪಕ್ಕದಲ್ಲಿ ಕುಳಿತ ಅಪರಿಚಿತ ವ್ಯಕ್ತಿಯೊಬ್ಬರು ಅನುಚಿತವಾಗಿ ವರ್ತಿಸಿದ್ದಾರೆ. ಬಳಿಕ ಬಾಲಕ ಮನೆಗೆ ತೆರಳಿದಾಗ ಆ ವ್ಯಕ್ತಿ ಮನೆಗೆ ಬಂದು ಲೈಂಗಿಕ ಕಿರುಕುಳ ನೀಡಿ ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ. 179/2026ರಂತೆ ಪೋಕ್ಸೋ ಕಾಯ್ದೆ-2012ರ ಕಲಂ 4(2) ಹಾಗೂ ಬಿಎನ್‌ಎಸ್-2023ರ ಕಲಂ 351(2)ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.ಪ್ರಕರಣದ ತನಿಖೆ ನಡೆಸಿದ ಪೊಲೀಸರು ವಿಟ್ಲ ಕೊಂಡಗಾಯಿ ನಿವಾಸಿ ಉಮೇಶ್ (53) ಎಂಬಾತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!