ಬಂಟ್ವಾಳ: ಬಿ.ಸಿ.ರೋಡ್‌ನ ಹೋಟೆಲ್ ಕೃಷ್ಣ ಕ್ಲಾಸಿಕ್ ಮತ್ತು ದಕ್ಷಿಣ್ ಕೋರ್ಟ್ ರೆಸ್ಟೋರೆಂಟ್ ಆಶ್ರಯದಲ್ಲಿ ಸ್ವಾತಂತ್ರ್ಯೋತ್ಸವದ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು.ಖ್ಯಾತ ನ್ಯಾಯವಾದಿ ಅಶ್ವನಿ ಕುಮಾರ್ ರೈ ಧ್ವಜಾರೋಹಣ ನೆರವೇರಿಸಿದರು. ಹೋಟೆಲ್ ಆಡಳಿತ ಮಂಡಳಿಯ ರಾಮಚಂದ್ರ ಶೆಟ್ಟಿ ಸ್ವಾಗತಿಸಿದರು. ವ್ಯವಸ್ಥಾಪಕ ಸುಂದರ್ ಎನ್. ನಡುಬೈಲು ಕವಾಯತು ನಡೆಸಿಕೊಟ್ಟರು.ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿಯ ನಿರ್ದೇಶಕರಾದ ರವೀಶಾ ಆರ್. ಶೆಟ್ಟಿ, ಸಿದ್ಧಾರ್ಥ್ ಶೆಟ್ಟಿ, ನ್ಯಾಯವಾದಿ ಅಶ್ವನಿ ಕುಮಾರ್ ರೈ ಹಾಗೂ ರಾಮಚಂದ್ರ ಶೆಟ್ಟಿ ಉಪಸ್ಥಿತರಿದ್ದರು.ಹೋಟೆಲ್ ಸಿಬ್ಬಂದಿ ಹಾಗೂ ಸಾರ್ವಜನಿಕರು ಧ್ವಜಾರೋಹಣ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಸುಂದರ್ ಎನ್. ನಡುಬೈಲು ಕಾರ್ಯಕ್ರಮ ನಿರೂಪಿಸಿದರು.











