ಪುತ್ತೂರು: ಪರಿಶಿಷ್ಟ ಪಂಗಡದ ಅಭಿವೃದ್ಧಿಗಾಗಿ ಮೀಸಲಿಟ್ಟಿದ್ದ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣದ ದುರುಪಯೋಗದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪುತ್ತೂರು ನಗರ ಮಂಡಲ ಹಾಗೂ ಗ್ರಾಮಾಂತರ ಮಂಡಲದ ವತಿಯಿಂದ ಪ್ರತಿಭಟನೆ ನಡೆಸಲಾಗುವುದು.ಆ.21ರಂದು ಶುಕ್ರವಾರ ಬೆಳಿಗ್ಗೆ 10ರಿಂದ ಮಧ್ಯಾಹ್ನ 12ರವರೆಗೆ ಅಮರ ಜವಾನ್ ಸ್ಮಾರಕ ಜ್ಯೋತಿ ಬಳಿ ಪ್ರತಿಭಟನಾ ಸಭೆ ನಡೆಯಲಿದೆ. ಬಳಿಕ ಸಹಾಯಕ ಆಯುಕ್ತರ ಮೂಲಕ ಮನವಿ ಸಲ್ಲಿಸಲಾಗುವುದು ಎಂದು ಬಿಜೆಪಿ ಪುತ್ತೂರು ನಗರ ಮಂಡಲದ ಮಾಧ್ಯಮ ವಕ್ತಾರ ರಾಜೇಶ್ ಬನ್ನೂರು ತಿಳಿಸಿದ್ದಾರೆ.

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಹಗರಣವನ್ನು ವಿಧಾನಸಭೆಯಲ್ಲಿ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕೃತವಾಗಿ ಒಪ್ಪಿಕೊಂಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿ. ನಾಗೇಂದ್ರ ವಿರುದ್ಧ ಸಿಬಿಐ ಮೂರು ದೋಷಾರೋಪಣಾ ಪಟ್ಟಿಗಳನ್ನು ಹಾಗೂ ಜಾರಿ ನಿರ್ದೇಶನಾಲಯ (ಇ.ಡಿ.) ಒಂದು ಆರೋಪಪಟ್ಟಿಯನ್ನು ಸಲ್ಲಿಸಿದೆ. ಪ್ರಕರಣದಲ್ಲಿ ನಾಗೇಂದ್ರ ಅವರು ಜೈಲು ಸೇರಿ ಬಳಿಕ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.ಇಂತಹ ಆರೋಪಗಳನ್ನು ಎದುರಿಸುತ್ತಿರುವ ಬಿ. ನಾಗೇಂದ್ರ ಅವರನ್ನು ನೂತನ ಸಚಿವ ಸಂಪುಟದಲ್ಲಿ ಮತ್ತೆ ಸಚಿವರನ್ನಾಗಿ ಮಾಡಿರುವುದು ಪರಿಶಿಷ್ಟ ಪಂಗಡದ ಸಮುದಾಯಕ್ಕೆ ಮಾಡಿರುವ ಅನ್ಯಾಯವಾಗಿದೆ ಎಂದು ಬಿಜೆಪಿ ದೂರಿದೆ.ಪ್ರತಿಭಟನೆಯಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಭಾಗವಹಿಸುವಂತೆ ಮನವಿ ಮಾಡಲಾಗಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!