ಬಂಟ್ವಾಳ: ಸಂಸ್ಥೆಯ ವ್ಯವಹಾರದ ಹಣ ಸಂಗ್ರಹಿಸಿ ಬೈಕ್‌ನಲ್ಲಿ ತೆರಳುತ್ತಿದ್ದ ಉದ್ಯೋಗಿಯೊಬ್ಬರಿಗೆ ತಲವಾರು ತೋರಿಸಿ ಬೆದರಿಸಿದ ನಾಲ್ವರು ಅಪರಿಚಿತರು ₹8.52 ಲಕ್ಷ ನಗದು ಹಣವನ್ನು ಸುಲಿಗೆ ಮಾಡಿಕೊಂಡು ಪರಾರಿಯಾದ ಘಟನೆ ಗುರುವಾರ ಮಧ್ಯಾಹ್ನ ಮಣಿನಾಲ್ಕೂರು ಮುಲ್ಕಾಜೆ ಮಾಡ ಎಂಬಲ್ಲಿ ನಡೆದಿದೆ.ಮಂಗಳೂರಿನ ಕಣ್ಣೂರು ನಿವಾಸಿ, ಸಿಮೆಂಟ್ ಹಾಗೂ ಕಬ್ಬಿಣ ಮಾರಾಟದ ಸಂಸ್ಥೆಯಲ್ಲಿ ಉದ್ಯೋಗಿಯಾಗಿರುವ ಮಯ್ಯದಿ (40) ಅವರು ಗುರುವಾರ ವಿವಿಧ ಅಂಗಡಿಗಳಿಂದ ಸಂಸ್ಥೆಯ ವ್ಯವಹಾರದ ಹಣ ಸಂಗ್ರಹಿಸಿ ಬೈಕ್‌ನಲ್ಲಿ ಪಾಣೆಮಂಗಳೂರು ಕಡೆಗೆ ತೆರಳುತ್ತಿದ್ದರು. ಕಕ್ಕೆಪದವಿನಿಂದ ಪಾಣೆಮಂಗಳೂರು ಕಡೆಗೆ ಬರುತ್ತಿದ್ದ ವೇಳೆ ಮಧ್ಯಾಹ್ನ ಸುಮಾರು 1 ಗಂಟೆಗೆ ಮಣಿನಾಲ್ಕೂರು ಮುಲ್ಕಾಜೆ ಮಾಡ ತಲುಪಿದಾಗ ಎರಡು ಬೈಕ್‌ಗಳಲ್ಲಿ ಬಂದ ನಾಲ್ವರು ಅಪರಿಚಿತರು ಅವರನ್ನು ಅಡ್ಡಗಟ್ಟಿದ್ದಾರೆ.ತಲವಾರು ತೋರಿಸಿ ಬೆದರಿಸಿದ ಆರೋಪಿಗಳು ಮಯ್ಯದಿ ಅವರ ಬಳಿಯಿದ್ದ ₹8,52,000 ನಗದು ಹಣವನ್ನು ಸುಲಿಗೆ ಮಾಡಿಕೊಂಡು ಪರಾರಿಯಾಗಿದ್ದಾರೆ.ಈ ಕುರಿತು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆರೋಪಿಗಳ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!