ಪುತ್ತೂರು: ಮಾಯಿದೆ ದೇವುಸ್ ಚರ್ಚ್ ಪುತ್ತೂರು, ಕ್ರಿಶ್ಚಿಯನ್ ಲೈಫ್ ಕಮ್ಯೂನಿಟಿ (ಸಿ.ಎಲ್.ಸಿ.), ಮಾಯಿದೆ ದೇವುಸ್ ಚರ್ಚ್ ಆರೋಗ್ಯ ಆಯೋಗ, ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು ಮಂಗಳೂರು ಹಾಗೂ ಇಂಡಿಯನ್ ಕ್ಯಾನ್ಸರ್ ಸೊಸೈಟಿ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಆ.23ರಂದು ಉಚಿತ ಆರೋಗ್ಯ ಮತ್ತು ಕ್ಯಾನ್ಸರ್ ತಪಾಸಣಾ ಶಿಬಿರ ನಡೆಯಲಿದೆ.ಮಾಯಿದೆ ದೇವುಸ್ ಚರ್ಚ್ ಸಭಾಂಗಣದಲ್ಲಿ ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆ ನಡೆಯುವ ಶಿಬಿರದಲ್ಲಿ ವಿವಿಧ ವಿಭಾಗಗಳ ತಜ್ಞ ವೈದ್ಯರು ತಪಾಸಣೆ ನಡೆಸಲಿದ್ದಾರೆ.ಮೆಡಿಸಿನ್, ಚರ್ಮರೋಗ, ಸ್ತ್ರೀರೋಗ, ಶಸ್ತ್ರಚಿಕಿತ್ಸೆ, ಕಿವಿ-ಮೂಗು-ಗಂಟಲು, ಮಕ್ಕಳ ವಿಭಾಗ, ಮೂಳೆ ಹಾಗೂ ಕಿವಿ ಮತ್ತು ಶ್ರವಣ ವಿಭಾಗಗಳ ವೈದ್ಯಕೀಯ ಸೇವೆಗಳು ಲಭ್ಯವಿರಲಿವೆ. ಇದರೊಂದಿಗೆ ಕ್ಯಾನ್ಸರ್ ಕುರಿತು ಮಾಹಿತಿ ಹಾಗೂ ಉಚಿತ ಕ್ಯಾನ್ಸರ್ ತಪಾಸಣೆ ನಡೆಯಲಿದೆ.ನೇತ್ರ ತಪಾಸಣೆಯ ವ್ಯವಸ್ಥೆಯಿದ್ದು, ರಿಯಾಯಿತಿ ದರದಲ್ಲಿ ಕನ್ನಡಕ ವಿತರಿಸಲಾಗುವುದು. ಮಹಿಳೆಯರಿಗೆ ಉಚಿತ ಪ್ಯಾಪ್ ಸ್ಮಿಯರ್ ತಪಾಸಣೆಯೂ ಇರಲಿದೆ.ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಶಿಬಿರದಲ್ಲಿ ಭಾಗವಹಿಸಿ ಆರೋಗ್ಯ ತಪಾಸಣೆಯ ಸದುಪಯೋಗ ಪಡೆದುಕೊಳ್ಳುವಂತೆ ಮಾಯಿದೆ ದೇವುಸ್ ಚರ್ಚ್ ಪ್ರಧಾನ ಧರ್ಮಗುರು ಹಾಗೂ ಕ್ರಿಶ್ಚಿಯನ್ ಲೈಫ್ ಕಮ್ಯೂನಿಟಿ ನಿರ್ದೇಶಕ ವಂ. ಡಾ. ಜೆ.ಬಿ. ಸಲ್ದಾನ್ಹಾ ಹಾಗೂ ಸಿ.ಎಲ್.ಸಿ. ಅಧ್ಯಕ್ಷ ವಿಲಿಯಂ ನೊರೋನ್ಹಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!