ಪುತ್ತೂರು: ನಗರ ಠಾಣೆಯಲ್ಲಿ ದಾಖಲಾಗಿರುವ ಅ.ಕ್ರ. 97/2026ರ ಪ್ರಕರಣದಲ್ಲಿ ಬಂಧಿತನಾಗಿರುವ ಪುತ್ತೂರು ಕಸಬಾ ನಿವಾಸಿ ಸುದರ್ಶನ ಪೈ (29) ವಿರುದ್ಧ ಈ ಹಿಂದೆ ಎರಡು ಪ್ರಕರಣಗಳು ದಾಖಲಾಗಿರುವುದು ಪೊಲೀಸ್ ಮಾಹಿತಿಯಿಂದ ತಿಳಿದುಬಂದಿದೆ.ಕಂಕನಾಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ. 182/2025ರಲ್ಲಿ ಎನ್‌ಡಿಪಿಎಸ್ ಕಾಯ್ದೆಯ ಕಲಂ 8(ಸಿ) ಅಡಿ ಹಾಗೂ ರಾಮನಗರ ಜಿಲ್ಲೆಯ ಕುದೂರು ಪೊಲೀಸ್ ಠಾಣೆಯಲ್ಲಿ ಅ.ಕ್ರ. 87/2021ರಲ್ಲಿ ಐಪಿಸಿ ಕಲಂ 307, 504 ಹಾಗೂ 34ರ ಅಡಿ ಪ್ರಕರಣ ದಾಖಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.ಗಲಾಟೆ ನಡೆದ ಸಂದರ್ಭದಲ್ಲಿ ಸುದರ್ಶನ ಪೈ ಅವರ ತಂದೆ ಸದಾಶಿವ ಪೈ ಸ್ಥಳದಲ್ಲಿರಲಿಲ್ಲ. ಘಟನೆ ಬಳಿಕ ಸ್ಥಳಕ್ಕೆ ಆಗಮಿಸಿ ಗಲಾಟೆ ಬಿಡಿಸಲು ಪ್ರಯತ್ನಿಸಿದ್ದರು ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.ಘಟನೆ ವೇಳೆ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಸ್ಥಳದಲ್ಲಿ ಜಮಾಯಿಸಿದ್ದರು. ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಸ್ಥಳದಿಂದ ತೆರಳುವಂತೆ ಪೊಲೀಸರು ಸೂಚಿಸಿದರೂ ಜನರು ತೆರಳದ ಹಿನ್ನೆಲೆಯಲ್ಲಿ ಲಘು ಲಾಠಿ ಪ್ರಹಾರ ನಡೆಸಿ ಜನರನ್ನು ಚದುರಿಸಲಾಗಿತ್ತು ಎಂದು ಪೊಲೀಸ್ ಇಲಾಖೆ ತಿಳಿಸಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!