ಪುತ್ತೂರು: ಆ.21ರಂದು ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ಚಿಕ್ಕಮುಡ್ನೂರು ನಿವಾಸಿ ಮಹಮ್ಮದ್ ನೌಶಾದ್ (30) ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ದೂರು ದಾಖಲಿಸಲಾಗಿದೆ.ಮಹಮ್ಮದ್ ನೌಶಾದ್ ವಿರುದ್ಧ ಈ ಹಿಂದೆ ಪುತ್ತೂರು ನಗರ ಠಾಣೆಯಲ್ಲಿ ಅ.ಕ್ರ. 79/2024ರಂತೆ ಭಾರತೀಯ ನ್ಯಾಯ ಸಂಹಿತೆ (BNS)ಯ ವಿವಿಧ ಸೆಕ್ಷನ್‌ಗಳಡಿ ಪ್ರಕರಣ ದಾಖಲಾಗಿತ್ತು. ಆ.21ರಂದು ನಡೆದ ಘಟನೆಗೆ ಸಂಬಂಧಿಸಿದಂತೆ ಇದೀಗ ಮತ್ತೊಂದು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.ಇವುಗಳನ್ನು ಹೊರತುಪಡಿಸಿ ಆತನ ವಿರುದ್ಧ ಬೇರೆ ಪ್ರಕರಣಗಳಿವೆಯೇ ಎಂಬ ಬಗ್ಗೆಯೂ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಸದ್ಯ ಮಹಮ್ಮದ್ ನೌಶಾದ್‌ನನ್ನು ದಸ್ತಗಿರಿ ಮಾಡಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.ಘಟನೆಗೆ ಸಂಬಂಧಿಸಿದ ವಿಡಿಯೋ ದೃಶ್ಯಗಳನ್ನು ಪರಿಶೀಲಿಸಲಾಗುತ್ತಿದ್ದು, ಪರಿಶೀಲನೆಯ ಬಳಿಕ ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಇಲಾಖೆ ತಿಳಿಸಿದೆ.











