ಪುತ್ತೂರು: ದರ್ಬೆಯಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿ ಘಟನಾ ಸ್ಥಳದಲ್ಲಿ ಲಾಠಿಚಾರ್ಜ್ ನಡೆಸಿದ್ದ ಕಾನ್‌ಸ್ಟೆಬಲ್‌ವೊಬ್ಬರು, ದೂರುದಾರರು ಹಾಗೂ ಪ್ರತಿದೂರುದಾರರು ಚಿಕಿತ್ಸೆ ಪಡೆಯುತ್ತಿದ್ದ ಆಸ್ಪತ್ರೆ ಬಳಿ ಕರ್ತವ್ಯದಲ್ಲಿದ್ದ ವೇಳೆ ಮದ್ಯಪಾನ ಮಾಡಿರುವುದಾಗಿ ಕೆಲವರು ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಆಲ್ಕೋಮೀಟರ್ ಪರೀಕ್ಷೆಗೆ ಒಳಪಡಿಸಲಾಗಿದ್ದು, ಮದ್ಯಪಾನ ಮಾಡಿರಲಿಲ್ಲ ಎಂಬುದು ದೃಢಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಕರ್ತವ್ಯನಿರತ ಪೊಲೀಸರ ಮೇಲೆ ಯಾವುದೇ ಹಲ್ಲೆ ನಡೆದಿಲ್ಲ ಎಂದು ಪೊಲೀಸ್ ಇಲಾಖೆ ಸ್ಪಷ್ಟಪಡಿಸಿದೆ.ಬಂಧನದ ಕುರಿತು ಆಕ್ಷೇಪ: ಪ್ರಕರಣ ಸಂಖ್ಯೆ 97/2026ರ ದೂರುದಾರರು ತಮ್ಮ ದೂರಿನಲ್ಲಿ ಪ್ರಮುಖ ಆರೋಪಿಯಾಗಿರುವ ಅಂಜನಾ ಪೈ ಅವರನ್ನು ಬಂಧಿಸಿಲ್ಲ ಎಂದು ಆಕ್ಷೇಪಿಸಿದ್ದಾರೆ. ಪ್ರಕರಣ ಸಂಖ್ಯೆ 98/2026ರ ದೂರುದಾರರು ತಮ್ಮ ಪುತ್ರ ಸುದರ್ಶನ್ ಪೈ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ನೌಷಾದ್ ಅವರನ್ನು ಬಂಧಿಸಿಲ್ಲ ಎಂದು ದೂರಿದ್ದಾರೆ.ಈ ಎರಡೂ ಆಕ್ಷೇಪಣೆಗಳನ್ನು ತನಿಖಾಧಿಕಾರಿಗಳು ಪರಿಶೀಲಿಸಿ, ಕಾನೂನುಬದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಅಥವಾ ದಾಖಲೆಗಳಿದ್ದಲ್ಲಿ ಪುತ್ತೂರು ನಗರ ಪೊಲೀಸ್ ಠಾಣೆಯ ಠಾಣಾಧಿಕಾರಿಗಳಿಗೆ ನೇರವಾಗಿ ಸಲ್ಲಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.











