ಬಂಟ್ವಾಳ: ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ 2016ರಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿ ಸುಮಾರು 9 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಪೊಲೀಸರು ಚಿಕ್ಕಮಗಳೂರಿನಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.ಪುಂಜಾಲಕಟ್ಟೆ ಠಾಣಾ ಅ.ಕ್ರ. 156/2016ರಲ್ಲಿ ಭಾರತೀಯ ದಂಡ ಸಂಹಿತೆಯ ಕಲಂ 379 ಹಾಗೂ ಎಂಎಂಆರ್‌ಡಿ ಕಾಯ್ದೆಯ ಕಲಂ 42, 42, 44ರಂತೆ ಪ್ರಕರಣ ದಾಖಲಾಗಿತ್ತು. ಪ್ರಕರಣದ ಆರೋಪಿಯಾಗಿರುವ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ನಿವಾಸಿ ಶಬೀರ್ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಸುಮಾರು 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ.ಆರೋಪಿಯನ್ನು ಪುಂಜಾಲಕಟ್ಟೆ ಠಾಣೆಯ ಹೆಡ್ ಕಾನ್‌ಸ್ಟೆಬಲ್ ರಾಜೇಶ್ (ಎಚ್‌ಸಿ 1023), ಪೊಲೀಸ್ ಕಾನ್‌ಸ್ಟೆಬಲ್ ಚೋಳಪ್ಪ ಸಂಶಿ (ಪಿಸಿ 2276) ಹಾಗೂ ನಾಗರಾಜ್ (ಪಿಸಿ 2524) ಅವರು ಚಿಕ್ಕಮಗಳೂರಿನಲ್ಲಿ ದಸ್ತಗಿರಿ ಮಾಡಿದ್ದಾರೆ.ಬಂಧಿತ ಆರೋಪಿಯನ್ನು ಆ.22ರಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.











