ಮಂಗಳೂರು: ಈದ್ ಮಿಲಾದ್ ಹಬ್ಬದ ಪ್ರಯುಕ್ತ ಆ.26ರಂದು ಘೋಷಿಸಲಾಗಿದ್ದ ಸಾರ್ವತ್ರಿಕ ರಜೆಯನ್ನು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಆ.25ಕ್ಕೆ ಬದಲಾಯಿಸುವ ಕುರಿತು ನಿಯಮಾನುಸಾರ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರ ಸೂಚಿಸಿದೆ.ಸ್ಥಳೀಯ ಪರಿಸ್ಥಿತಿಯನ್ನು ಪರಿಗಣಿಸಿ ರಜೆಯ ದಿನಾಂಕ ಬದಲಾಯಿಸುವಂತೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾಧಿಕಾರಿಗಳು ಸರ್ಕಾರಕ್ಕೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಸೋಮವಾರ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದೆ.ರಾಜ್ಯಾದ್ಯಂತ ಈದ್ ಮಿಲಾದ್ ಪ್ರಯುಕ್ತ ಆ.26ರಂದು ಸಾರ್ವತ್ರಿಕ ರಜೆ ಘೋಷಿಸಲಾಗಿತ್ತು. ಆದರೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಆ.25ರಂದು ರಜೆ ನೀಡುವ ಬಗ್ಗೆ ಜಿಲ್ಲಾಧಿಕಾರಿಗಳ ಹಂತದಲ್ಲಿಯೇ ನಿಯಮಾನುಸಾರ ತೀರ್ಮಾನ ಕೈಗೊಳ್ಳುವಂತೆ ಸರ್ಕಾರ ನಿರ್ದೇಶಿಸಿದೆ












