ಪುತ್ತೂರು : ಕಾರ್ಯಕ್ರಮವೊಂದರಿಂದ ಬಾಲಕಿಯನ್ನು ಮನೆಗೆ ಕರೆದೊಯ್ಯುವ ನೆಪದಲ್ಲಿ ದಾರಿಮಧ್ಯೆ ಲೈಂಗಿಕ ಕಿರುಕುಳ ನೀಡಿರುವ ಆರೋಪದಡಿ ದ.ಕ. ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಆ.23ರಂದು ರಾತ್ರಿ ಕಾರ್ಯಕ್ರಮವೊಂದರಿಂದ ಬಾಲಕಿಯನ್ನು ಮನೆಗೆ ಬಿಡುವ ಸಲುವಾಗಿ ಆರೋಪಿ ಅದ್ದು ಪಡೀಲ್ ಎಂಬಾತ ತನ್ನ ದ್ವಿಚಕ್ರ ವಾಹನದಲ್ಲಿ ಕರೆದೊಯ್ಯುತ್ತಿದ್ದ ಎನ್ನಲಾಗಿದೆ. ಈ ವೇಳೆ ದಾರಿಮಧ್ಯೆ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವುದಾಗಿ ಬಾಲಕಿಯ ತಾಯಿ ಪೊಲೀಸರಿಗೆ ದೂರು ನೀಡಿದ್ದಾರೆ.ದೂರಿನ ಆಧಾರದಲ್ಲಿ ದ.ಕ. ಮಹಿಳಾ ಪೊಲೀಸ್ ಠಾಣೆಯಲ್ಲಿ ಅ.ಕ್ರ. 46/2026ರಂತೆ ಬಿಎನ್‌ಎಸ್ 2023ರ ಕಲಂ 75 ಹಾಗೂ ಪೋಕ್ಸೊ ಕಾಯ್ದೆಯ ಕಲಂ 8, 12ರಡಿ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ.












