ಪುತ್ತೂರು : ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಹಾಗೂ ಹಿಂದೂ ಜಾಗರಣೆ ವೇದಿಕೆ ನೀಡಿರುವ ಬಂದ್ ಕರೆಗೆ ಸಂಬಂಧಿಸಿದಂತೆ ಪುತ್ತೂರಿನ ಪರಿಸ್ಥಿತಿಯನ್ನು ಅವಲೋಕಿಸಲು ಪಶ್ಚಿಮ ವಲಯ ಮಹಾ ಪೊಲೀಸ್ ನಿರೀಕ್ಷಕ (ಐಜಿಪಿ) ಅಮಿತ್ ಸಿಂಗ್ ಮಂಗಳವಾರ ಪುತ್ತೂರಿಗೆ ಭೇಟಿ ನೀಡಿದರು.ಮಧ್ಯಾಹ್ನ 12 ಗಂಟೆ ಸುಮಾರಿಗೆ ಪುತ್ತೂರಿನ ದರ್ಭೆಯಲ್ಲಿರುವ ನಿರೀಕ್ಷಣಾ ಮಂದಿರಕ್ಕೆ ಆಗಮಿಸಿದ ಐಜಿಪಿ ಅಮಿತ್ ಸಿಂಗ್ ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ. ಅವರು ಭೇಟಿ ಮಾಡಿ, ಪುತ್ತೂರು ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಪರಿಸ್ಥಿತಿ ಮತ್ತು ಕೈಗೊಂಡಿರುವ ಭದ್ರತಾ ಕ್ರಮಗಳ ಕುರಿತು ಮಾಹಿತಿ ನೀಡಿದರು.ಈದ್ ಮಿಲಾದ್ ಹಬ್ಬದ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಪುತ್ತೂರು ನಗರ ಠಾಣಾ ವ್ಯಾಪ್ತಿಯಲ್ಲಿ ವ್ಯಾಪಕ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ. ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಪರಿಸ್ಥಿತಿಯ ಮೇಲೆ ಪೊಲೀಸರು ನಿಗಾ ಇರಿಸಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!