ಪುತ್ತೂರು: ಸಾರ್ವಜನಿಕ ಶಾಂತಿ, ಸುವ್ಯವಸ್ಥೆ ಕದಡುವಂತಹ ಹಾಗೂ ಪ್ರಚೋದನಕಾರಿ ಸುಳ್ಳು ಸುದ್ದಿಯನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಮಾಡಿದ ಆರೋಪದಡಿ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.‘ಮಂಜುನಾಥ್’ ಎಂಬ ಹೆಸರಿನ ವಾಟ್ಸಾಪ್ ಖಾತೆಯಿಂದ ರಾಜಕೀಯ ಪಕ್ಷವೊಂದರ ಹೆಸರಿನಲ್ಲಿ, ಆ.26ರಂದು ಪುತ್ತೂರು ಬಂದ್ ನಡೆಸುವಂತೆ ಸವಾಲು ಹಾಕುವ ರೀತಿಯ ಪ್ರಚೋದನಕಾರಿ ಹಾಗೂ ಸಾರ್ವಜನಿಕ ಶಾಂತಿ, ಸುವ್ಯವಸ್ಥೆ ಕದಡುವಂತಹ ಸುಳ್ಳು ಸುದ್ದಿಯನ್ನು ಪ್ರಸಾರ ಮಾಡಿರುವುದು ಪೊಲೀಸರ ಗಮನಕ್ಕೆ ಬಂದಿದೆ.ಈ ಹಿನ್ನೆಲೆಯಲ್ಲಿ ವಾಟ್ಸಾಪ್ ಖಾತೆ ಹೊಂದಿರುವ ವ್ಯಕ್ತಿಯ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 103/2026, ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 353(2)ರಂತೆ ಪ್ರಕರಣ ದಾಖಲಿಸಲಾಗಿದೆ. ಪ್ರಕರಣದ ಕುರಿತು ತನಿಖೆ ನಡೆಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!